ಬೆಂಗಳೂರು: ಬೆಂಗಳೂರು ಜನರ ಬಹುದಿನದ ಕನಸು ಇಂದು ನನಸಾಗಿದೆ. ಸಿಲ್ಕ್ ಬೋರ್ಡರ್, ರಾಗಿ ಗುಡ್ಡ, ಬೊಮ್ಮಸಂದ್ರ ಸೇರಿದಂತೆ ಸುಮಾರು 19.15 ಕಿಲೋಮಿಟರ್ ನಮ್ಮ ಮೆಟ್ರೋ ಹಳದಿ ಮಾರ್ಗವನ್ನು ಇಂದು (ಭಾನುವಾರ ಆ. 10) ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಉದ್ಘಾಟಿಸಿದರು.
ಹೌದು, ಇಂದು ಮೋದಿ ಅವರು ರಾಗಿಗುಡ್ಡ ಸ್ಟೇಷನ್ ನಲ್ಲಿ ಮೆಟ್ರೋ ರೈಲಿಗೆ ಹಸಿರು ನಿಶಾನೆ ತೋರಿಸುವ ಮೂಲಕ ಆರ್ ವಿ ರಸ್ತೆ ಮತ್ತು ಬೊಮ್ಮಸಂದ್ರ ನಡುವಣ 19.15 ಕಿ.ಮೀ. ಉದ್ದದ ಹಳದಿ ಮಾರ್ಗವನ್ನು ಉದ್ಘಾಟಿಸಿದರು. ಇದನ್ನೂ ಓದಿ: ವಂದೇ ಭಾರತ್ ರೈಲಿಗೆ ಚಾಲನೆ ನೀಡಿದ ಪ್ರಧಾನ
ಈ ಸಂದರ್ಭದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೇಹಲೋಟ್, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್, ಕೇಂದ್ರ ಸಚಿವರಾದ ಮನೋಹರಲಾಲ್, ಶೋಭಾ ಕರಂದ್ಲಾಜೆ ಮತ್ತಿತರರು ಉಪಸ್ಥಿತರಿದ್ದರು.
