​ಪ್ರಧಾನಿ ಮೋದಿ, ಬಿಲ್ ಗೇಟ್ಸ್ ಸಂವಾದದ

​ಪ್ರಧಾನಿ ಮೋದಿ, ಬಿಲ್ ಗೇಟ್ಸ್ ಸಂವಾದದ

ನವದೆಹಲಿ: ಇತ್ತೀಚಿನ ದಿನಗಳಲ್ಲಿ ಭಾರತದಲ್ಲಿ ಮಹಿಳೆಯರು ತಮ್ಮ ಸ್ವಂತ ಕಾಲಿನಲ್ಲಿ ನಿಂತಿಕೊಳ್ಳಲು ಹೊಸ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುತ್ತಿದ್ದಾರೆ  ಎಂದು ಪ್ರಧಾನಿ ನರೇಂದ್ರ ಮೋದಿಯವರು ಹೇಳಿದರು.

ಅವರೆಂದು ಮೈಕ್ರೋಸಾಫ್ಟ್ ಸಂಸ್ಥಾಪಕ ಬಿಲ್ ಗೇಟ್ಸ್ ಜೊತೆ ಸಂವಾದ ನಡೆಸಿದ ವೇಳೆ, ಭಾರತದಲ್ಲಿ ಅತಿ ಹೆಚ್ಚು ಡಿಜಿಟಲ್ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳಲಾಗುತ್ತಿದೆ ಎಂದು ಹೇಳಿದರು.

ಇತ್ತೀಚಿನ ದಿನಗಳಲ್ಲಿ ಯುವಕರು ಸೇರಿದಂತೆ ಎಲ್ಲರೂ ಹೊಸ ತಂತ್ರಜ್ಞಾನ ಅಳವಡಿಸುವುದರಿಂದ ತಮ್ಮ ಜ್ಞಾನ ಹೆಚ್ಚಿಸಿಕೊಳ್ಳುವುದರ ಜೊತೆಗೆ ಇನ್ನಿತರ ಉಪಯುಕ್ತ ಚಟುವಟಿಕೆಗಳಲ್ಲಿ ತೊಡಗುತ್ತಿದ್ದಾರೆ ಎಂದು ಹೇಳಿದರು.

ಭಾರತದಲ್ಲಿ ಡಿಜಿಟಲ್ ಕ್ರಾಂತಿಯ ಬಗ್ಗೆ ಚರ್ಚಿಸಿದರು. ಇದೇ ವೇಳೆ, ಗ್ರಾಮೀಣ ಭಾರತದಲ್ಲಿ ಡಿಜಿಟಲ್ ಸಾರ್ವಜನಿಕ ಮೂಲಸೌಕರ್ಯ ಸ್ಥಾಪಿಸುವ ಮಹತ್ವಾಕಾಂಕ್ಷೆಯನ್ನು ಮೋದಿ ವ್ಯಕ್ತಪಡಿಸಿದರು.

ಉಭಯ ನಾಯಕರ ಸಂವಾದದ ಪ್ರೋಮೋವನ್ನು ಗುರುವಾರ ಬಿಡುಗಡೆ ಮಾಡಲಾಗಿತ್ತು. ಇದೀಗ ಸಂವಾದದ ಪೂರ್ತಿ ವಿಡಿಯೋ ಬಿಡುಗಡೆಯಾಗಿದೆ. ಪ್ರಧಾನಿ ಮೋದಿ ಸಹ ಎಕ್ಸ್​ ಖಾತೆಯಲ್ಲಿ ವಿಡಿಯೋ ಪೋಸ್ಟ್ ಮಾಡಿದ್ದಾರೆ. ಬಿಲ್​ ಗೇಟ್ಸ್ ಜತೆಗೆ ಒಳನೋಟವುಳ್ಳ ಒಂದು ಸಂವಾದ. ದಯವಿಟ್ಟು ನೋಡಿ ಎಂದು ಎಕ್ಸ್​ ಪೋಸ್ಟ್​​ನಲ್ಲಿ ಮೋದಿ ಉಲ್ಲೇಖಿಸಿದ್ದಾರೆ.

 

Related