ಸರ್ಕಾರಿ ಶಾಲೆಗೆ ದೇಣಿಗೆ ನೀಡಿದ ‘ಪವರ್ ಸ್ಟಾರ್’

ಸರ್ಕಾರಿ ಶಾಲೆಗೆ ದೇಣಿಗೆ ನೀಡಿದ ‘ಪವರ್ ಸ್ಟಾರ್’

ಬೆಂಗಳೂರು : ಕಿಚ್ಚ ಸುದೀಪ್ ಸರ್ಕಾರಿ ಶಾಲೆಗಳನ್ನು ದತ್ತು ಪಡೆದು ಅದರ ಅಭಿವೃದ್ಧಿಗೆ ಮುಂದಾಗಿದ್ದರು. ಇದೀಗ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಕೂಡಾ ಅದೇ ಕೆಲಸಕ್ಕೆ ಕೈ ಹಾಕಿದ್ದಾರೆ.

ಪುನೀತ್ ಕೂಡಾ ಈಗ ಸರ್ಕಾರಿ ಶಾಲೆಯೊಂದರ ಅಭಿವೃದ್ಧಿಗೆ 1 ಲಕ್ಷ ರೂ. ದೇಣಿಗೆ ನೀಡುವ ಮೂಲಕ ಸುದ್ದಿಯಾಗಿದ್ದಾರೆ. ಗಂಗಾವತಿ ತಾಲೂಕಿನ ಸರ್ಕಾರಿ ಶಾಲೆಗೆ ದೇಣಿಗೆ ನೀಡಿದ್ದಾರೆ. ಈ ಹಣವನ್ನು ಶಾಲೆಯ ಅಭಿವೃದ್ಧಿ ಮತ್ತು ವಿದ್ಯಾರ್ಥಿಗಳಿಗೆ ಕಲಿಕಾ ಪ್ರೋತ್ಸಾಹಕ್ಕಾಗಿ ಬಳಸಲಾಗುವುದು ಎಂದು ಶಾಲೆ ತಿಳಿಸಿದ್ದಾರೆ.

Related