ಪ್ರಜ್ವಲ್‌ ಪ್ರಕರಣ: ಎಸ್ಐಟಿ ತಂಡದಿಂದ ಮಹತ್ವದ ನಿರ್ಧಾರ

ಪ್ರಜ್ವಲ್‌ ಪ್ರಕರಣ: ಎಸ್ಐಟಿ ತಂಡದಿಂದ ಮಹತ್ವದ ನಿರ್ಧಾರ

ಬೆಂಗಳೂರು: ಪ್ರಜ್ವಲ್ ರೇವಣ್ಣ ಅವರು ನೂರಾರು ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ವ್ಯಸಗಿರುವ ವಿಡಿಯೋವನ್ನು ಚಿತ್ರೀಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ರಾಜ್ಯ ಸರ್ಕಾರ ಎಸ್ಐಟಿ ಅಧಿಕಾರಿಗಳಿಗೆ ಪ್ರಕರಣವನ್ನು ವರ್ಗಾವಣೆ ಮಾಡಿದ್ದು, ಎಸ್ಐಟಿ ಅಧಿಕಾರಿಗಳು ಚೂರುಕಿನ ಕಾರ್ಯಚರಣೆಯನ್ನು ಕೈಗೊಂಡಿದೆ.

ಇನ್ನು ಪ್ರಜ್ವಲ್ ರೇವಣ್ಣ ಅವರ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ಈಗ ಮತ್ತೊಂದು ಮಹತ್ವದ ನಿರ್ಧಾರವನ್ನು ಕೈಗೊಂಡಿದೆ. ಇದನ್ನೂ ಓದಿ: ನಡೆಯುತ್ತಿರುವ ಲೋಕಸಭಾ ಚುನಾವಣೆ ಎರಡನೇ ಸ್ವಾತಂತ್ರ್ಯ ಹೋರಾಟ: ಸಿಎಂ

ಹೌದು, ಪ್ರಜ್ವಲ್ ರೇವಣ್ಣ ಅವರಿಂದ ಲೈಂಗಿಕ ಕಿರುಕುಳಕ್ಕೆ ಒಳಗಾದ ಸಂತ್ರಸ್ತೆಯರಿಗೆ ಸಹಾಯವಾಗಲೆಂದು ಎಸ್ಐಟಿ ತಂಡ ಸಹಾಯವಾಣಿಯೊಂದನ್ನು ಆರಂಭಿಸಿದೆ. ಪ್ರಜ್ವಲ್ ರೇವಣ್ಣ ಅವರಿಂದ ಲೈಂಗಿಕ ಕಿರುಕುಳ ಅನುಭವಿಸಿದ ಯಾರಾದರೂ ಸಂತ್ರಸ್ತರಿದ್ದರೆ ದೂರು ನೀಡಲು ಎಸ್‌ಐಟಿ ಸಹಾಯವಾಣಿಯೊಂದನ್ನು ಆರಂಭಿಸಿದೆ.

ಲೈಂಗಿಕ ಹಗರಣಕ್ಕೆ ಸಂಬಂಧಿಸಿದಂತೆ ಲೈಂಗಿಕ ಕಿರುಕುಳಕ್ಕೆ ಒಳಗಾದ ಸಂತ್ರಸ್ತೆಯರು 6360938947 ಸಹಾಯ ವಾಣಿ ಸಂಖ್ಯೆಗೆ ಕರೆ ಮಾಡಿ ದೂರು ನೀಡಬಹುದು ಎಂದು ಎಸ್‌ಐಟಿ ತಿಳಸಿದೆ. ಈ ಕುರಿತು ಪ್ರಕಟಣೆ ಹೊರಡಿಸಿರುವ ಎಸ್‌ಐಟಿ, ಸಂತ್ರಸ್ತರು ತನಿಖಾ ತಂಡಕ್ಕೆ ಕರೆ ಮಾಡಿಯೂ ಮಾಹಿತಿ ನೀಡಬಹುದು ಎಂದು ತಿಳಿಸಿದೆ. ಅಲ್ಲದೆ, ಮಾಹಿತಿ ನೀಡಿದ ಸಂತ್ರಸ್ತರ ಹೆಸರನ್ನು ಗೌಪ್ಯವಾಗಿಡುದಾಗಿ ಹೇಳಿದೆ.

Related