ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಸಚಿವ ಕೃಷ್ಣಭೈರೇಗೌಡ ಹೇಳಿದ್ದೇನು…?

ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಸಚಿವ ಕೃಷ್ಣಭೈರೇಗೌಡ ಹೇಳಿದ್ದೇನು…?

ಬೆಂಗಳೂರು: ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ವಿಡಿಯೋಗಳು ಈಗ ರಾಜ್ಯ ಮಾತ್ರವಲ್ಲದೆ ಇಡೀ ದೇಶದಾದ್ಯಂತ ಹರಿದಾಡುತ್ತಿದ್ದು, ಈಗಾಗಲೇ ಕರ್ನಾಟಕ ರಾಜ್ಯ ಪ್ರಜ್ವಲ್ ಪ್ರಕರಣವನ್ನು ಎಸ್ಐಟಿಗೆ ವರ್ಗಾವಣೆ ಮಾಡಿದ್ದು, ಎಸ್ಐಟಿಯಿಂದ ಈಗಾಗಲೇ ತನಿಖೆ ಶುರುವಾಗಿದೆ.

ಇನ್ನು ಪ್ರಜ್ವಲ್ ರೇವಣ್ಣ ಅವರ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಕೃಷ್ಣ ಬೈರೇಗೌಡ ಅವರು ಪ್ರತಿಕ್ರಿಯಿಸಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಸಾವಿರಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಜ್ವಲ್ ರೇವಣ್ಣ ಮತ್ತು ಅವರ ಕುಟುಂಬ ಇದಕ್ಕೆ ಉತ್ತರ ನೀಡಬೇಕು ಎಂದು ಹೇಳಿದ್ದಾರೆ.

ಹಲವು ಮಹಿಳೆಯರ ಮೇಲೆ ಪ್ರಜ್ವಲ್‌ ಅತ್ಯಾಚ್ಯಾರ ಎಸಗಿರುವುದು ಕೇವಲ ಮೇಲ್ನೋಟಕ್ಕೆ ಕಂಡುಬರುತ್ತಿದೆ. ಈ ಬಗ್ಗೆ ದೇವೇಗೌಡರ ಕುಟುಂಬದವರು ಉತ್ತರ ಕೊಡಬೇಕು. ಎಸ್‌ಐಟಿ ತನಿಖೆಯಿಂದ ಸತ್ಯಾಂಶ ಹೊರಗೆ ಬಂದು, ತಪ್ಪು ಮಾಡಿದವರಿಗೆ ಶಿಕ್ಷೆ ಆಗಬೇಕು, ಎಂದರು.

 

Related