ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್; ಎಚ್ ಡಿ ಕೆ ಹೇಳಿದ್ದೇನೆ..?

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್; ಎಚ್ ಡಿ ಕೆ ಹೇಳಿದ್ದೇನೆ..?

ಬೆಂಗಳೂರು: ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ರಾಜ್ಯ ರಾಜಕೀಯದಲ್ಲಿ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಸುದ್ದಿ ಈಗ ಬಿಸಿಬಿಸಿಯಾಗಿ ಚರ್ಚೆ ಆಗುತ್ತಿದ್ದು, ಈ ಪ್ರಕರಣದ ತನಿಖೆಯನ್ನು ಎಸ್​ಐಟಿಗೆ ವಹಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಇನ್ನು ಇದರ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ನಗರದಲ್ಲಿದ್ದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಮ್ಮ ಕುಟುಂಬದಲ್ಲಿ ಪ್ರತಿಯೊಬ್ಬ ಹೆಣ್ಣು ಮಗಳಿಗೆ ಹೆಚ್ಚಾಗಿ ಗೌರವ ನೀಡುತ್ತೇವೆ. ನಮ್ಮ ಮನೆ ಬಳಿ ಯಾರಾದರೂ ಕಷ್ಟ ಕೇಳಿಕೊಂಡು ಬಂದರೆ ಅವರಿಗೂ ಕೂಡ ಗೌರವದಿಂದ ಕಂಡು ಅವರ ಕಷ್ಟವನ್ನು ಬಗೆಹರಿಸುತ್ತೇವೆ ಎಂದು ಹೇಳಿದ್ದಾರೆ.

ಹೆಣ್ಣು ಮಕ್ಕಳ ವಿಚಾರದಲ್ಲಿ ಅತ್ಯಂತ ಗೌರವಯುತವಾಗಿ ನಡೆದುಕೊಂಡಿದ್ದೇವೆ. ಯಾರಾದರೂ ಕಷ್ಟ ಹೇಳಿಕೊಂಡು ಬಂದರೆ ಅವರ ಕಷ್ಟ ಪರಿಹರಿಸಿ ಕಳುಹಿಸಿದ್ದೇವೆ. ನಾವಂತೂ ಮಹಿಳೆಯರಿಗೆ ಅತ್ಯಂತ ಹೆಚ್ಚಿನ ಗೌರವ ನೀಡಿದ್ದೇವೆ ಎಂದು ಹೇಳಿದರು.

ಈ ಬಗ್ಗೆ ಎಸ್ಐಟಿ ತನಿಖೆಗೆ ಈಗಾಗಲೇ ಸರ್ಕಾರ ಆದೇಶ ಮಾಡಿದೆ. ಎಸ್‌ಐಟಿ ತನಿಖೆಯಿಂದ ವಾಸ್ತವಾಂಶ ಹೊರಗೆ ಬರಲಿ. ಈ ನೆಲದ ಕಾನೂನಿನಲ್ಲಿ ಯಾರೇ ತಪ್ಪು ಮಾಡಿದರು ಉಪ್ಪು ತಿಂದವರು ನೀರು ಕುಡಿಯಲೇ ಬೇಕು. ನಾವಂತೂ ಯಾವುದಕ್ಕೂ ತಪ್ಪು ಮಾಡಿದ ವಿಷಯದಲ್ಲಿ ಯಾರಿಗೂ ಕ್ಷಮಿಸುವ ಪ್ರಶ್ನೆಯಿಲ್ಲ. ತನಿಖೆಯ ವರದಿ ಸಂಪೂರ್ಣ ಹೊರಗೆ ಬರಲಿ ಬಂದ ನಂತರ ಮಾತನಾಡುತ್ತೇನೆ ಎಂದು ಕುಮಾರಸ್ವಾಮಿ ಸ್ಪಷ್ಟಪಡಿಸಿದರು.

 

Related