ಪ್ರಜ್ವಲ್ ರೇವಣ್ಣ ಪೆನ್ ಡ್ರೈ ಪ್ರಕರಣಕ್ಕೆ ಮೆಘಾಟ್ವಿಸ್ಟ್..!

ಪ್ರಜ್ವಲ್ ರೇವಣ್ಣ ಪೆನ್ ಡ್ರೈ ಪ್ರಕರಣಕ್ಕೆ ಮೆಘಾಟ್ವಿಸ್ಟ್..!

ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ಕಿರುಕುಳಕ್ಕೆ ಒಳಗಾಗಿದ್ದ ಸಂತ್ರಸ್ತೆಯನ್ನು ಮಾಜಿ ಸಚಿವ ಎಚ್ ಡಿ ರೇವಣ್ಣ ಅವರು ಅಪಹರಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ರೇವಣ್ಣ ಅವರನ್ನು ಬಂಧಿಸಲಾಗಿದ್ದು, ಅಪಹರಿಸಲಾಗಿದ್ದ ಮಹಿಳೆಯನ್ನು ವಿಚಾರಣೆಯಲ್ಲಿ ಸಾಕ್ಷಿ ಕೇಳಿದರೆ ಈಗ ಮಹಿಳೆ ಉಲ್ಟಾ ಹೊಡೆದಿದ್ದಾಳೆ ಎಂಬ ಮಾಹಿತಿ ಹೊರ ಬಿದ್ದಿದೆ.

ಹೌದು, ಮಾಜಿ ಸಚಿವ ಎಚ್ ಡಿ ರೇವಣ್ಣ ಅವರ ವಿರುದ್ಧ ಅಪಹರಣ ಆರೋಪ ಪ್ರಕರಣಕ್ಕೆ ಈಗ ಟ್ವಿಸ್ಟ್ ಸಿಕ್ಕಿದೆ. ಅಪಹರಿಸಲ್ಪಟ್ಟಿದ್ದರು ಎನ್ನಲಾಗಿರುವ ಸಂತ್ರಸ್ತ ಮಹಿಳೆ ಎಸ್ಐಟಿ ಸುರ್ಪರ್ಧಿಯಲ್ಲಿರುವಾಗಲೇ ಆಕೆಯ ಸ್ಪಷ್ಟೀಕರಣದ ವಿಡಿಯೋವೊಂದು ವೈರಲ್ ಆಗಿದೆ.

ಇದನ್ನೂ ಓದಿ: ಕಾಂಗ್ರೆಸ್ ಪರಿಷತ್ ಚುನಾವಣೆ ಎದುರಿಸಲು ಸಜ್ಜು..!

ಎಚ್.ಡಿ.ರೇವಣ್ಣ, ಭವಾನಿ ರೇವಣ್ಣ, ಪ್ರಜ್ವಲ್ ರೇವಣ್ಣ ಅಥವಾ ಸತೀಶ್ ಬಾಬು ಅವರಿಂದ ಏನೂ ತೊಂದರೆಯಾಗಿಲ್ಲ. ತಾನು ಅಪಹರಿಸಲ್ಪಟ್ಟಿಲ್ಲ ಎಂದು ಸಂತ್ರಸ್ತೆ ಹೇಳಿರುವುದು ಪ್ರಕರಣಕ್ಕೆ ತಿರುವು ನೀಡಿದೆ.

ಸಂತ್ರಸ್ತೆಯ ಪುತ್ರ ನೀಡಿದ್ದ ದೂರಿನ್ವಯ ಎಚ್.ಡಿ.ರೇವಣ್ಣ ಹಾಗೂ ಸತೀಶ್ ಬಾಬು ವಿರುದ್ದ ಕೆ.ಆರ್.ನಗರ ಠಾಣೆಯಲ್ಲಿ ದೂರು ದಾಖಲಾಗಿತ್ತು. ಬಳಿಕ ಇಬ್ಬರನ್ನೂ ಬಂಧಿಸಲಾಗಿತ್ತು. ಇದರ ಬೆನ್ನಲೇ ಸಂತ್ರಸ್ತೆಯ ಹೇಳಿಕೆಯ ವಿಡಿಯೋ ವೈರಲ್ ಆಗಿದ್ದು ಆರೋಪಕ್ಕೆ ವ್ಯತಿರಿಕ್ತವಾಗಿ ಸಂತ್ರಸ್ತೆ ಹೇಳಿಕೆ ನೀಡಿದ್ದಾರೆ

ಹಾಗಿದ್ದರೆ ಮಾಜಿ ಸಚಿವ ಎಚ್ ಡಿ ರೇವಣ್ಣ ಅವರನ್ನು ಬಂಧನದಿಂದ ಬಿಡುಗಡೆ ಮಾಡುತ್ತಾರೆ ಎಂಬ ಕುತೂಹಲ ಈಗ ಹೆಚ್ಚಾಗಿದೆ.

 

Related