ಮೈಸೂರು: ಮೈಸೂರನ್ನು ನಾಲ್ವಡಿ ಒಡೆಯರೆಗಿಂತ ಸಿದ್ದರಾಮಯ್ಯ ಅವರು ಹೆಚ್ಚು ಅಭಿವೃದ್ಧಿ ಮಾಡಿದ್ದಾರೆ ಎಂದು ಯತೀಂದ್ರ ಅವರ ಮಾತಿಗೆ ಬಿಜೆಪಿ ನಾಯಕರು ವಿರೋಧಪಕ್ಷ ವ್ಯಕ್ತಪಡಿಸುತ್ತಿರುವ ಬೆನ್ನಲ್ಲೇ ಮತ್ತೆ ಇದೀಗ ಕೆ ಆರ್ ಎಸ್ ಡ್ಯಾಂ ಕಟ್ಟಲು ಅಡಿಗಲ್ಲು ಹಾಕಿದ್ದು ಟಿಪ್ಪು ಸುಲ್ತಾನ್ ಎಂದು ಎಚ್ ಸಿ ಮಹದೇವಪ್ಪಅವರ ಹೇಳಿಕೆಗೆ ಮತ್ತೆ ಇದೀಗ ಬಿಜೆಪಿ ನಾಯಕರು ಕೆಂಡಮಂಡಲವಾಗಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿದ ಮಾಜಿ ಸಂಸದ ಪ್ರತಾಪ್ ಸಿಂಹ ಅವರು, ಜ್ಯೂನಿಯರ್ ಡಾಕ್ಟರ್ ಹೊಸ ಇತಿಹಾಸ ಬರೆಯಲು ಹೊರಟರೆ, ಸೀನಿಯರ್ ಡಾಕ್ಟರ್ ಇತಿಹಾಸ ತಿರುಚಲು ಯತ್ನಿಸಿದ್ದಾರೆ ಎಂದು ಸಚಿವ ಡಾ.ಹೆಚ್.ಸಿ ಮಹದೇವಪ್ಪ ವಿರುದ್ಧ ಮಾಜಿ ಸಂಸದ ಪ್ರತಾಪ್ ಸಿಂಹ ಕಿಡಿಕಾರಿದ್ದಾರೆ. ಜ್ಯೂನಿಯರ್ ಡಾಕ್ಟರ್ ಯತೀಂದ್ರ ನಾಲ್ವಡಿಗಿಂತ ನಮ್ಮಪ್ಪನೇ ದೊಡ್ಡ ವ್ಯಕ್ತಿ ಎಂದಿದ್ದರು. ಈಗ ಸೀನಿಯರ್ ಡಾಕ್ಟರ್ ಮಹದೇವಪ್ಪನ ಸರದಿ ಎಂದು ವ್ಯಂಗ್ಯವಾಡಿದ್ದಾರೆ.
ಟಿಪ್ಪು ಸುಲ್ತಾನ್ ಕೆಆರ್ಎಸ್ಗೆ ಅಡಿಗಲ್ಲು ಇಟ್ಟಿದ್ದರೆ ಯಾರೋ ಮುಲ್ಲಾನ ಮೌಲ್ವಿನೋ ಡಿಪಿಆರ್ ಮಾಡಿರಬೇಕು ತಾನೇ? ಅವರು ಯಾರು ಅಂತ ಹೇಳಿ? ಟಿಪ್ಪು ಅಳ್ವಿಕೆ ಇದ್ದ ವೇಳೆ ವಿಶ್ವೇಶ್ವರಯ್ಯ ಅವರೇ ಹುಟ್ಟಿರಲಿಲ್ಲ. ನಾಲ್ವಡಿ ಒಡೆಯರ್, ವಿಶ್ವೇಶ್ವರಯ್ಯ ಇರದಿದ್ದರೆ ಕೆಆರ್ಎಸ್ ಜಲಾಶಯವೇ ನಿರ್ಮಾಣ ಆಗುತ್ತಿರಲಿಲ್ಲ. 1799ರಲ್ಲಿ ಟಿಪ್ಪು ಸತ್ತು ಹೋದ. 1911ರಲ್ಲಿ ಕೆಆರ್ಎಸ್ ಕಟ್ಟಲು ಶುರು ಮಾಡಿದರು. ಎಲ್ಲಿಂದ ಎಲ್ಲಿಗೆ ಲಿಂಕ್ ಇದೆ ಮಹದೇವಪ್ಪ ಅವರೇ? ಎಂದು ಪ್ರಶ್ನಿಸಿದ್ದಾರೆ.
