ಇಂದು ರಾಜಧಾನಿಗೆ ಭೇಟಿ ನೀಡಲಿದ್ದಾರೆ ರಾಷ್ಟ್ರಪತಿ ದ್ರೌಪದಿ ಮುರ್ಮು

ಇಂದು ರಾಜಧಾನಿಗೆ ಭೇಟಿ ನೀಡಲಿದ್ದಾರೆ ರಾಷ್ಟ್ರಪತಿ ದ್ರೌಪದಿ ಮುರ್ಮು

ಬೆಂಗಳೂರು: ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಕ್ಟೋಬರ್ 26 ರಿಂದ 27 ರವರೆಗೆ ಕರ್ನಾಟಕ ಮತ್ತು ತಮಿಳುನಾಡಿಗೆ ಭೇಟಿ ನೀಡಲಿದ್ದಾರೆ. ಹೀಗಾಗಿ ಎರಡೂ ರಾಜ್ಯಗಳಲ್ಲಿ ಪೊಲೀಸ್ ಬಿಗಿ ಭದ್ರತೆಯನ್ನು ಹೆಚ್ಚಿಸಲಾಗಿದೆ.

ಬೆಂಗಳೂರಿನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್‌ನ ಸ್ತಾಪನಾ ಸುವರ್ಣ ಮಹೋತ್ಸವದ ಸಪ್ತಾಹ ಆಚರಣೆಗೆ ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಚಾಲನೆ ನೀಡಲಿದ್ದಾರೆ. ಬಳಿಕ ಅವರು ಬೆಂಗಳೂರಿನ ಐಐಎಂನಲ್ಲಿ ಎನ್ ಎಸ್ ರಾಘವನ್ ಉದ್ಯಮಶೀಲತಾ ಕಲಿಕೆ ಕೇಂದ್ರದ ಮಹಿಳಾ ಉದ್ಯಮಿಗಳು ಮತ್ತು ಅಧಿಕಾರಿಗಳೊಂದಿಗೆ ಸಂವಾದ ನಡೆಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇಂದು ಮಧ್ಯಾಹ್ನ 3.20ಕ್ಕೆ ಬೆಂಗಳೂರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೆಹಲಿಯಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಬಳಿಕ ಸಂಜೆ 4 ಗಂಟೆಗೆ ಬನ್ನೇರುಘಟ್ಟ ರಸ್ತೆಯಲ್ಲಿ ಐಐಎಂ ಸಂಸ್ಥಾಪನಾ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ನಂತರ 6.05ಕ್ಕೆ ಬೆಂಗಳೂರಿನಿಂದ ಚೆನ್ನೈಗೆ ತೆರಳಲಿದ್ದಾರೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸುವರ್ಣ ಮಹೋತ್ಸವ ಆಚರಣೆಗ ಚಾಲನೆ ನೀಡಿ ಮಾತನಾಡಲಿದ್ದಾರೆ. ಅದೇ ಕಾರ್ಯಕ್ರಮದಲ್ಲಿ ಐಐಎಂ ಬಿ ಕ್ಯಾಂಪಸ್ ಕುರಿತ ಪುಸ್ತಕ ಬಿಡುಗಡೆ ಮತ್ತು ಐಐಎಂಬಿ ಕುರಿತಾದ ಸಾಕ್ಷ್ಯಚಿತ್ರವನ್ನೂ ಪ್ರದರ್ಶಿಸಲಾಗುತ್ತದೆ ಎಂದು ಐಐಎಂ ಬೆಂಗಳೂರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

Related