ಬಿಜೆಪಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬಿಜೆಪಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಮಂಡ್ಯ: ಕರ್ನಾಟಕ ರಾಜ್ಯದಲ್ಲಿ ಬಿಜೆಪಿ ಪಕ್ಷದವರು ಬೆಂಕಿ ಹಚ್ಚುವ ಕೆಲಸವನ್ನು ಮಾಡುತ್ತಿದ್ದಾರೆ. ಎಂದು ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಪ್ರಿಯಾಂಕರಿಗೆ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡುವ ಮೂಲಕ ಬಿಜೆಪಿ ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಸಮಾಜ ಶಾಂತಿಯುತವಾಗಿದ್ದರೆ ಬಿಜೆಪಿಗೆ ತಿಂದ ಅನ್ನ ಜೀರ್ಣವಾಗಲ್ಲ. ಇಷ್ಟು ದಿನ ಕರಾವಳಿಯನ್ನು ಕೋಮು ರಾಜಕಾರಣದ ಪ್ರಯೋಗ ಶಾಲೆಯನ್ನಾಗಿ ಮಾಡಿಕೊಂಡಿದ್ದ ಬಿಜೆಪಿ ಹಾಗೂ ಸಂಘ ಪರಿವಾರ ಈಗ ಮಂಡ್ಯದಲ್ಲಿ ತಮ್ಮ ಪ್ರಯೋಗ ಆರಂಭಿಸಿದೆ. ಬೆಂಕಿ ಹಚ್ಚಿ, ಆ ಬೆಂಕಿಯಲ್ಲಿ ರಾಜಕೀಯದ ಚಳಿ ಕಾಯಿಸಿಕೊಳ್ಳುತ್ತಿರುವ ಬಿಜೆಪಿ ನಾಯಕರು ಅತ್ಯಂತ ಕೀಳುಮಟ್ಟಕ್ಕೆ ಇಳಿದಿದ್ದಾರೆ ಎಂದು ವಾಗ್ದಾಳಿ ಮಾಡಿದರು.

ವಿಪಕ್ಷ ನಾಯಕನೆಂದರೆ ಘನತೆಯುಕ್ತ ಸ್ಥಾನ, ಆ ಸ್ಥಾನದ ಗೌರವವನ್ನು ಮಣ್ಣುಪಾಲು ಮಾಡುತ್ತಿರುವ ವಿರೋಧ ಪಕ್ಷದ ನಾಯಕ ಆರ್​. ಅಶೋಕ್ ಮತ್ತು ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರೇ ರಾಷ್ಟ್ರಧ್ವಜದ ಬದಲು ಭಗವಾಧ್ವಜ ಹಾರಿಸುವ ಷಡ್ಯಂತ್ರ ರೂಪಿಸಿದ್ಯಾರು? ಅನುಮತಿ ಪತ್ರದ ಷರತ್ತುಗಳನ್ನ ಉಲ್ಲಂಘಿಸಲು ಪ್ರೇರೇಪಿಸಿದ್ದು ಯಾರು? ಬಿಜೆಪಿ ಅದೆಷ್ಟು ದಿನಗಳಿಂದ ಶಾಂತಿ ಕೆಡಿಸುವ ಸಂಚು ರೂಪಿಸಿತ್ತು? ಕಾನೂನು, ನೀತಿ ನಿಯಮ ಬಿಜೆಪಿ ಕಾಲ ಕೆಳಗಿನ ಕಸದಂತೆ ನೋಡೋದೇಕೆ? ಎಂದು ಪ್ರಶ್ನಿಸಿದ್ದಾರೆ.

Related