ನಾಮಪತ್ರ ಸಲ್ಲಿಕೆ ಕೇಂದ್ರಗಳ ಬಳಿ ನಿಷೇಧಾಜ್ಞೆ..!

ನಾಮಪತ್ರ ಸಲ್ಲಿಕೆ ಕೇಂದ್ರಗಳ ಬಳಿ ನಿಷೇಧಾಜ್ಞೆ..!

ಬೆಂಗಳೂರು: ಇಂದಿನಿಂದ ಲೋಕಸಭಾ ಚುನಾವಣೆಯ ಕಣ ಇನ್ನಷ್ಟು ರಂಗೆ ರಂಗೆರಲಿದ್ದು,

ಇಂದಿನಿಂದ ರಾಜ್ಯದಲ್ಲಿ ಎರಡು ಹಂತದಲ್ಲಿ ನಾಮ ಪತ್ರ ಸಲ್ಲಿಕೆ ಪ್ರಾರಂಭವಾಗಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿಗಳು ಇಂದು ನಾಮಪತ್ರ ಸಲ್ಲಿಕೆಯನ್ನು ಪ್ರಾರಂಭ ಮಾಡಿದ್ದರೆ.

ಇನ್ನು ನಾಮಪತ್ರ ಸಲ್ಲಿಕೆ ವೇಳೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆದಂತೆ ಕಚೇರಿಯ ಸುತ್ತಮುತ್ತ ಬಿಗಿ ಭದ್ರತೆಯನ್ನು ಒದಗಿಸಲಾಗಿದೆ ಎಂದು ತಿಳಿದುಬಂದಿದೆ.

ಯೆಸ್ ಇಂದಿನಿಂದ ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ರಾಜ್ಯದಲ್ಲಿ ಒಟ್ಟು 2 ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಏಪ್ರಿಲ್ 26 ರಂದು ಮೊದಲ ಹಂತದ ಮತದಾನ ಪ್ರಕ್ರಿಯೆ ನಡೆಯಲಿದೆ. 2ನೇ ಹಂತದ ಮತದಾದನ ಮೇ 7 ರಂದು ನಡೆಯಲಿದೆ. ಜೂನ್​ 4 ರಂದು ಫಲಿತಾಂಶ ಪ್ರಕಟವಾಗಲಿದೆ.

ಈ ಹಿನ್ನೆಲೆ ಇಂದು ಬಿಜೆಪಿ, ಜೆಡಿಎಸ್, ಕಾಂಗ್ರೆಸ್ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲಿದ್ದಾರೆ. ನಾಮಪತ್ರ ಸಲ್ಲಿಕೆಗೆ ಆಗಮಿಸುವ ಅಭ್ಯರ್ಥಿಗಳ ಜೊತೆಗೆ ಹೆಚ್ಚಿನ ಸಂಖ್ಯೆಯಲ್ಲಿ ಬೆಂಬಲಿಗರು ಕೂಡ ಆಗಮಿಸಲಿದ್ದು ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ನಾಮಪತ್ರ ಸಲ್ಲಿಕೆ ಕೇಂದ್ರಗಳ ಬಳಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

 

Related