ತುಮಕೂರು: ಹೈಕಮಾಂಡ್ ಸೂಚನೆ ಮೇರೆಗೆ ಸಚಿವ ಕೆ ಎನ್ ರಾಜಣ್ಣ ಅವರನ್ನು ಸಚಿವ ಸ್ಥಾನದಿಂದ ವಜಾ ಮಾಡಲಾಗಿದ್ದು ತುಮಕೂರು ಜಿಲ್ಲೆ, ಮಧುಗಿರಿ ತಾಲೂಕಿನಲ್ಲಿ ರಾಜಣ್ಣ ಅವರ ಅಭಿಮಾನಿಗಳು ಹಾಗೂ ಕಾರ್ಯಕರ್ತರು ಮಧುಗಿರಿ ಪಟ್ಟಣಕದಲ್ಲಿ ಬಂದ್ ಗೆ ಕರೆ ನೀಡಿ ಪ್ರತಿಭಟನೆಯನ್ನು ನಡೆಸಿದರು.
ಹೌದು, ಕೆ ಎನ್ ರಾಜಣ್ಣ ಅವರ ಸಚಿವ ಸ್ಥಾನದಿಂದ ವಜಾ ಮಾಡಿರುವುದರಿಂದ ಕೆ ಎನ್ ರಾಜಣ್ಣ ಅವರ ಅಭಿಮಾನಿಗಳು ಹಾಗೂ ಕಾರ್ಯಕರ್ತರು ಸೇರಿದಂತೆ ಇನ್ನೂ ಹಲವರು ರಾಜಣ್ಣ ಅವರ ಪರವಾಗಿ ನಿಂತು ಪ್ರತಿಭಟನೆಯನ್ನು ನಡೆಸಿದ ಜೊತೆಗೆ ಬಸ್ ಸ್ಟಾಪ್ ನಲ್ಲಿ ಟೈರ್ ಗೆ ಬೆಂಕಿ ಹಚ್ಚಿ ಆಕ್ರೋಶ ಹೊರ ಹಾಕಿದ್ದಾರೆ. ಇದನ್ನೂ ಓದಿ: ಕೆ ಎನ್ ರಾಜಣ್ಣ ಸಚಿವ ಸ್ಥಾನದಿಂದ ವಜಾ, ಗೃಹ ಸಚಿವರು ಹೇಳಿದ್ದೇನು?
ರಾಜಣ್ಣರ ರಾಜೀನಾಮೆ ವಾಪಸ್ ಪಡೆಯುವಂತೆ ಬೆಂಬಲಿಗರು ಒತ್ತಾಯಿಸಿದರು. ಬಳಿಕ ಪಾದಯಾತ್ರೆ ಮೂಲಕ ಎಸಿ ಕಚೇರಿ ವರೆಗೆ ಅಭಿಮಾನಿಗಳು ಸಾಗಿದರು. ಅವರನ್ನು ಚದುರಿಸಲು ಪೊಲೀಸರು ಹರಸಾಹಸಪಟ್ಟರು. ಎಸಿ ಕಚೇರಿಯಿಂದ ತುಮಕೂರು ಗೇಟ್ ವರೆಗೂ ರಾಜಣ್ಣ ಬೆಂಬಲಿಗರ ಪಾದಯಾತ್ರೆ ನಡೆಯಿತು.
