ಆರೋಪಿಗಳನ್ನು ಬಂಧಿಸಿ, ವಿದ್ಯಾರ್ಥಿನಿಗೆ ನ್ಯಾಯ ಒದಗಿಸಿ

ಆರೋಪಿಗಳನ್ನು ಬಂಧಿಸಿ, ವಿದ್ಯಾರ್ಥಿನಿಗೆ ನ್ಯಾಯ ಒದಗಿಸಿ

ಮೈಸೂರು: ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ನಡೆದಿರುವ ವಿದ್ಯಾರ್ಥಿನಿ ಮೇಲಿನ ಸಾಮೂಹಿಕ ಅತ್ಯಾಚಾರ ರಾಜ್ಯದಲ್ಲಿ ಕುಸಿದು ಬಿದ್ದಿರುವ ಕಾನೂನು-ಸುವ್ಯವಸ್ಥೆಗೆ ಸಾಕ್ಷಿ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪೊಲೀಸರು ತಕ್ಷಣ ದುಷ್ಕರ್ಮಿಗಳನ್ನು ಬಂಧಿಸಿ ವಿದ್ಯಾರ್ಥಿನಿಗೆ ನ್ಯಾಯ ಒದಗಿಸಿ, ಭಯಭೀತ ಜನರಲ್ಲಿ ಧೈರ್ಯ ತುಂಬಬೇಕೆಂದಿದ್ದಾರೆ.

ಮೈಸೂರು ಮಾತ್ರವಲ್ಲ ಇಡೀ ರಾಜ್ಯದಲ್ಲಿ ಅಪರಾಧಗಳ ಸಂಖ್ಯೆ ಹೆಚ್ಚಾಗುತ್ತಿದೆ. ಸಿ.ಎಂ ಬೊಮ್ಮಾಯಿ ಬಹಳಷ್ಟು ಬೇಗ ಸಂಪುಟ ವಿಸ್ತರಣೆಯ ಸಂಕಟದಿAದ ಪಾರಾಗಿ ರಾಜ್ಯದಲ್ಲಿ ಹೆಚ್ಚುತ್ತಿರುವ ಅಪರಾಧಗಳ ನಿಯಂತ್ರಣಕ್ಕೆ ಗಮನ ಹರಿಸಬೇಕೆಂದು ಟ್ವಿಟರ್ ಮೂಲಕ ಸಲಹೆ ಕೊಟ್ಟಿದ್ದಾರೆ.

Related