ಬೆಂಗಳೂರು: ಪ್ರತಿಯೊಂದು ರಂಗದಲ್ಲಿ ಮುಂದುವರಿಯಬೇಕೆಂದರೆ ಅದಕ್ಕೆ ಶಿಕ್ಷಣ ಪ್ರಮುಖ ಘಟ್ಟವಾಗಿರುವುದರಿಂದ ಸಿಎಸ್ಸಾರ್ ನಿಧಿಯಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಗಳ ಮಾದರಿಯಲ್ಲಿ ಸಿಎಸ್ಸಾರ್ ಶಾಲೆಗಳ ನಿರ್ಮಾಣ ಯೋಜನೆ ಕುರಿತು ಬಹುದೊಡ್ಡ ಕನಸನ್ನು ಹೊಂದಿದ್ದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಕನಸು ಕನಸಾಗಿಯೇ ಉಳಿದಿದೆ.
ಸಿಎಸ್ಸಾರ್ ಯೋಜನೆ ಅಡಿಯಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಗಳ ನಿರ್ಮಾಣ ನಿರೀಕ್ಷಿತ ಮಟ್ಟದಲ್ಲಿ ಪ್ರಗತಿ ಕಾಣದಿರುವುದರಿಂದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ವಿಧಾನಸೌಧದಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಸಿಇಒಗಳ ಜೊತೆ ಸಭೆಯಲ್ಲಿ ಡಿಸಿಎಂ ಅಕ್ಷಯಪಾ ಹೊರಹಾಕಿದ್ದಾರೆ. ರಾಜ್ಯದಲ್ಲಿ ಪ್ರತಿ ವರ್ಷ 8000 ಕೋಟಿ ರೂ. ಸಿಎಸ್ಸಾರ್ ನಿಧಿ ಲಭ್ಯವಿದ್ದು, ಇದನ್ನು ಸಿಎಸ್ಸಾರ್ ಶಾಲೆಗಳ ನಿರ್ಮಾಣಕ್ಕೆ ಬಳಸಿಕೊಳ್ಳಬೇಕು ಎಂದು ವರ್ಷದ ಹಿಂದೆಯೇ ಸೂಚನೆ ನೀಡಲಾಗಿತ್ತು.
ಆದರೆ ಇದು ಸಮರ್ಪಕವಾಗಿ ಅನುಷ್ಠಾನಗೊಂಡಿಲ್ಲ. ರಾಜ್ಯದ ಕಾರ್ಪೊರೇಟ್ ಸಂಸ್ಥೆಗಳು ಸಿಎಸ್ಸಾರ್ ನಿಧಿಯನ್ನು ಅನ್ಯ ರಾಜ್ಯಗಳ ಖಾಸಗಿ ಸೇವಾ ಸಂಸ್ಥೆಗಳಿಗೆ ಗಳಿಗೆ ಚೆಕ್ ನಲ್ಲಿ ಕೊಟ್ಟು ಅದರಲ್ಲಿ ಶೇಕಡಾ 50 ರಷ್ಟನ್ನು ನಗದು ಸ್ವರೂಪದಲ್ಲಿ ವಾಪಸ್ಸು ಪಡೆಯುತ್ತಿರುವುದು ಗಮನಕ್ಕೆ ಬಂದಿದೆ. ಇದೊಂದು ಅಕ್ರಮ. ಇದರಿಂದ ನಮ್ಮ ರಾಜ್ಯದ ನಿಧಿ ದುರುಪಯೋಗ ಆಗುತ್ತಿದೆ. ಇದನ್ನು ನಮ್ಮ ರಾಜ್ಯದ ಶಾಲೆಗಳ ಅಭಿವೃದ್ಧಿಗೆ ಬಳಸುವುದು ನಿಮ್ಮ ಜವಾಬ್ದಾರಿ ಎಂದು ಹೇಳಿದರು. ಇದನ್ನೂ ಓದಿ:ಪ್ರಜಾಸೌಧವನ್ನು ಸ್ಥಾಪಿಸಲು ರಾಜ್ಯ ಸರ್ಕಾರ ಅಸ್ತು
ಮೂರೂ ಗ್ರಾಮ ಪಂಚಾಯಿತಿಗೆ 1 ಪಬ್ಲಿಕ್ ಶಾಲೆ ಕಟ್ಟಿಕೊಡಲಿ. ಜಮೀನು ಬೇಕಿದ್ದರೆ ಸರಕಾರದಿಂದಲೇ ಕೊಡೋಣ. ನೀವೇ ಜಾಗ ಗುರುತಿಸಿ. ನಾವು ವಿನ್ಯಾಸ ಕೊಡೋಣ. ಅವರು ಕಟ್ಟಡ ಕಟ್ಟಿ, ಮೂಲಸೌಕರ್ಯ ಒದಗಿಸಲಿ. ಆ ಶಾಲಾ ಕಟ್ಟಡದ ಮೇಲೆ ರಾಜ್ಯ ಸರಕಾರದ ಜತೆಗೆ ಆಯಾ ಸಂಸ್ಥೆಗಳ ಹೆಸರಿನ ಫಲಕ ಹಾಕಿಕೊಳ್ಳಲಿ. ಈ ಶಾಲೆಗಳಿಗೆ ಖಾಸಗಿ ಶಾಲೆಗಳಿಂದ ತಲಾ ಒಬ್ಬರು ನುರಿತ ಶಿಕ್ಷಕರನ್ನು ಪೂರೈಸುವ ಜವಾಬ್ದಾರಿ ವಹಿಸೋಣ ಎಂದರು.
