ಪಲ್ಸ್ ಪೋಲಿಯೋ ಲಸಿಕೆ ಆಂದೋಲನ

ಪಲ್ಸ್ ಪೋಲಿಯೋ ಲಸಿಕೆ ಆಂದೋಲನ

ಜೇವರ್ಗಿ : ತಾಲೂಕಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ರಾಷ್ಟಿಯ ಪಲ್ಸ್ ಪೋಲಿಯೋ ಲಸಿಕೆ ಆಂದೋಲನಾ ಕಾರ್ಯಕ್ರಮಕ್ಕೆ ತಾಲೂಕು ದಂಡಾಧಿಕಾರಿ ಸಿದ್ದರಾಯ ಬೋಸಗಿ ಹಾಗೂ ತಾಲೂಕು ವೈದ್ಯಾಧಿಕಾರಿ ಡಾ. ಸಿದ್ದು ಪಾಟೀಲರವರು ಮಗುವಿಗೆ ಲಸಿಕೆ ಹಾಕುವುದರ ಮೂಲಕ ಚಾಲನೆ ನೀಡಿದರು.

ತಾಲೂಕು ದಂಡಾಧಿಕಾರಿ ಮಾತನಾಡಿ, ತಾಲೂಕಿನ ಎಲ್ಲಾ ಹಳ್ಳಿಗಳಲ್ಲಿ ಕನಿಷ್ಠ 3 ದಿನಗಳವರೆಗೆ ಐದು ವರ್ಷದ ಒಳಗಿನ ಎಲ್ಲಾ ಮಕ್ಕಳಿಗೆ ಈ ಲಸಿಕೆ ಹಾಕಿಸಬೇಕು ಎಂದು ಹೇಳಿದರು. ಕಡ್ಡಾಯವಾಗಿ ಎಲ್ಲಾ ಮಕ್ಕಳಿಗೆ ಲಸಿಕೆ ಹಾಕಿಸಬೇಕು.

ಈ ಸಂದರ್ಭದಲ್ಲಿ ಖುದ್ದಾಗಿ ದಂಡಾಧಿಕಾರಿಗಳು ತಮ್ಮ ಮಕ್ಕಳನ್ನು ಕರೆಸಿ ಪೋಲಿಯೋ ಲಸಿಕೆ ಹಾಕಿಸಿದರು. ತಾಲೂಕು ವೈದ್ಯಾಧಿಕಾರಿ ಸಿದ್ದು ಪಾಟೀಲ್ ಮಾತನಾಡಿ, ನಮ್ಮ ತಾಲೂಕಿನ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಹಾಗೂ ಅಂಗನವಾಡಿ ಆಶಾ ಕಾರ್ಯಕರ್ತರನ್ನು ಈ ಪೋಲಿಯೋ ಲಸಿಕಾ ಕಾರ್ಯಕ್ರಮಕ್ಕೆ ನಿಯೋಜನೆ ಮಾಡಲಾಗಿದೆ.

ಪ್ರತಿಯೊಂದು ಅಂಗನವಾಡಿ ಕೇಂದ್ರದಲ್ಲಿ ಲಸಿಕೆ ಹಾಕಲಾಗುತ್ತದೆ ಆದ್ದರಿಂದ ಸಾರ್ವಜನಿಕರು ತಮ್ಮ ಮಕ್ಕಳನ್ನು ಕಡ್ಡಾಯವಾಗಿ ಲಸಿಕೆ ಹಾಕಿಸಿ ದೇಶವನ್ನು ಪೋಲಿಯೊ ಮುಕ್ತ ರಾಷ್ಟವನ್ನಾಗಿ ಮಾಡೋಣ ಎಂದು ಹೇಳಿದರು.

ಈ ಸಂದರ್ಭದಲ್ಲಿ ದಂತವೈದ್ಯರಾದ ಮಂಜುನಾಥ, ಆಸ್ಪತ್ರೆ ಸಿಬ್ಬಂದಿ ಗಳು ಈ ಲಸಿಕೆ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Related