ಮಾಡದ ತಪ್ಪಿಗೆ ಶಿಕ್ಷೆ; ಕಣ್ಣೀರಿಟ್ಟ ರೇವಣ್ಣ ..!

ಮಾಡದ ತಪ್ಪಿಗೆ ಶಿಕ್ಷೆ; ಕಣ್ಣೀರಿಟ್ಟ ರೇವಣ್ಣ ..!

ಬೆಂಗಳೂರು: ಕಿಡ್ನ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಎಚ್ ಡಿ ರೇವಣ್ಣ ಅವರು ಈಗಾಗಲೇ ಕಳೆದ ಮೂರು ನಾಲ್ಕು ದಿನಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿ ಬಂಧನವಾಗಿದ್ದು, ಪರಪ್ಪನ ಅಗ್ರಹಾರದಲ್ಲಿರುವ ಎಚ್ ಡಿ ರೇವಣ್ಣ ಅವರನ್ನು ಇಂದು ಜಿ.ಟಿ.ದೇವೇಗೌಡ  ಅವರು ಭೇಟಿ ಮಾಡಿದ್ದಾರೆ.

ಇನ್ನು ಈ ಸಂದರ್ಭದಲ್ಲಿ ಎಚ್ ಡಿ ರೇವಣ್ಣ ಅವರು ಜೆ ಟಿ ದೇವೇಗೌಡ ಅವರ ಮುಂದೆ ಕಣ್ಣೀರು ಹಾಕಿದ್ದಾರೆ ಎಂದು ತಿಳಿದುಬಂದಿದೆ.

ಹೌದು ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪಹರಣ ಪ್ರಕರಣದಲ್ಲಿ  ಪರಪ್ಪನ ಅಗ್ರಹಾರದಲ್ಲಿರುವ ಮಾಜಿ ಸಚಿವ ಹೆಚ್‌ ಡಿ ರೇವಣ್ಣ ಅವರನ್ನು  ಮಾಜಿ ಸಚಿವ  ಜಿ ಟಿ ದೇವೇಗೌಡ  ಇಂದು ಭೇಟಿ ಮಾಡಿದ್ದಾರೆ. ಭೇಟಿ ವೇಳೆ ಜಿ.ಟಿ.ದೇವೇಗೌಡ ಮುಂದೆ ರೇವಣ್ಣ ಕಣ್ಣೀರು ಹಾಕಿದ್ದಾರಂತೆ.

ಇದನ್ನೂ ಓದಿ: ಮಹಾರಾಷ್ಟ್ರದ ಸಿಎಂ ಏಕನಾಥ್ ಶಿಂಧೆ ಅವರು ಭ್ರಮೆಯಲ್ಲಿದ್ದಾರೆ: ಸಿದ್ದರಾಮಯ್ಯ

ಜೈಲಿನಲ್ಲಿರುವ ರೇವಣ್ಣ ಅವರನ್ನು ಭೇಟಿ ಮಾಡಿ ಬಂದ ಬಳಿಕ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಬಳಿ ಹೇಳಿಕೆ ನೀಡಿರುವ ಜಿ.ಟಿ.ದೇವೇಗೌಡ, ತಪ್ಪು ಮಾಡದೆ ಇರೋ ವಿಚಾರಕ್ಕೆ ಸಿಲುಕಿಸಿದ್ರು ಅಂತ  ರೇವಣ್ಣ ಕಣ್ಣೀರು ಹಾಕಿದರು ಎಂದಿದ್ದಾರೆ.

ರೇವಣ್ಣ ಜೈಲಿಗೆ ಹೋದ ದಿನದಿಂದ ಬಂದಿರಲಿಲ್ಲ. ಅವರ ಆರೋಗ್ಯ ಉಭಯ ಕುಶಲೋಪರಿ ವಿಚಾರಿಸಲು ಬರಬೇಕೆಂದು ಮೂರು ದಿನದಿಂದ ಮನಸ್ಸಲ್ಲಿತ್ತು. ಭಾನುವಾರ ರಜೆ, ಬಿಡೋದಿಲ್ಲ ಅಂತಾ ಹೇಳಿದ್ರು. ಅದಕ್ಕೆ ಇಂದು ಮಾತನಾಡಲು ಬಂದಿದ್ದೇನೆ ಎಂದು ಹೇಳಿದರು.

 

Related