ರಾಗಿ ಕೇಂದ್ರ ಉದ್ಘಾಟನೆ

ರಾಗಿ ಕೇಂದ್ರ ಉದ್ಘಾಟನೆ

ಮೈಸೂರು : ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು, ಬಂಡಿಪಾಳ್ಯ ಎಪಿಎಂಸಿಗೆ ಭೇಟಿ ನೀಡಿ, ರಾಗಿ ಬೆಂಬಲ ಬೆಲೆ ಖರೀದಿ ಕೇಂದ್ರವನ್ನು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅನೇಕ ರೈತಪರ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದಾರೆ. ಕೇಂದ್ರ ಸರ್ಕಾರ ಸಹ ಭತ್ತ, ಗೋಧಿ ಸೇರಿದಂತೆ ಅನೇಕ ಆಹಾರ ಧಾನ್ಯಗಳಿಗೆ ಬೆಂಬಲ ಬೆಲೆ ಘೋಷಿಸಿದೆ ಎಂದರು.

ರಾಜ್ಯ ಸರ್ಕಾರದಿಂದಲೂ ರೈತರಿಗೆ ಬೆಂಬಲ ಬೆಲೆ ನೀಡುತ್ತಿದ್ದು, ರಾಜ್ಯದ ಹಲವೆಡೆ ರಾಗಿ ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ. ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಇನ್ನು ಎಪಿಎಂಸಿಯನ್ನು ಯಾವುದೇ ಕಾರಣಕ್ಕೂ ಮುಚ್ಚುವ ಪ್ರಶ್ನೆಯೇ ಇಲ್ಲ. ಕೇಂದ್ರ ಸರ್ಕಾರ ಸಹ ಈ ಸಾಲಿನ ಬಜೆಟ್‌ನಲ್ಲಿ ಎಪಿಎಂಸಿಗಳ ಉನ್ನತೀಕರಣಕ್ಕೆ ಅನುದಾನ ಮೀಸಲಿಟ್ಟಿದೆ. ಒಟ್ಟಾರೆ 24.50 ಲಕ್ಷ ರೈತರಿಗೆ 15.300 ಕೋಟಿ ರೂಪಾಯಿ ಸಾಲ ನೀಡುವ ಗುರಿಯಲ್ಲಿ ಈಗಾಗಲೇ 19.99.508 ರೈತರಿಗೆ 12,975.34 ಕೋಟಿ ರೂಪಾಯಿ ಸಾಲ ನೀಡಲಾಗಿದೆ ಎಂದು ಸಹಕಾರ ಸಚಿವ ಸೋಮಶೇಖರ್ ಅವರು ಮಾಹಿತಿ ನೀಡಿದರು.

Related