ರಾಹುಲ್‌ಗಾಂಧಿಗೆ ಕೊರೋನ ಸೋಂಕು ಧೃಡ

ರಾಹುಲ್‌ಗಾಂಧಿಗೆ ಕೊರೋನ ಸೋಂಕು ಧೃಡ

ನವದೆಹಲಿ: ದೇಶಾದ್ಯಂತ ಕೊರೋನಾ ಅಟ್ಟಹಾಸ ಹೆಚ್ಚುಯಾಗುತ್ತಿದ್ದು, ಇದೀಗ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರಿಗೂ ಕೊರೋನಾ ಸೋಂಕು ತಗುಲಿದೆ. ಈ ಕುರಿತು ಸ್ವತ: ರಾಹುಲ್ ಮಾಹಿತಿ ನೀಡಿದ್ದಾರೆ.

ನನಗೆ ಸೌಮ್ಯ ರೋಗ ಲಕ್ಷಣಗಳನ್ನು ಅನುಭವಿಸಿದ ನಂತರ, ಕೊರೋನ ಸೋಂಕು ಇರೋದು ಪತ್ತೆಯಾಗಿದ್ದು, ಇತ್ತೀಚೆಗೆ ನನ್ನೊಂದಿಗೆ ಸಂಪರ್ಕದಲ್ಲಿರುವ ಎಲ್ಲರೂ, ದಯವಿಟ್ಟು ಎಲ್ಲಾ ಸುರಕ್ಷತಾ ಪ್ರೋಟೋಕಾಲ್‌ಗಳನ್ನು ಅನುಸರಿಸಿ ಮತ್ತು ಸುರಕ್ಷಿತವಾಗಿರಿ’ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

ಕಾಂಗ್ರೆಸ್ಸಿನ ಮತ್ತೊಬ್ಬ ಹಿರಿಯ ಮುಖಂಡ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಕೂಡ ಕೊರೋನ ಸೋಂಕಿಗೆ ಈಡಾಗಿದ್ದು ಅವರು ಕೂಡ ಚಿಕಿತ್ಸೆಗಾಗಿ ನಿನ್ನೆಯಿಂದ ಆಸ್ಪತ್ರೆಯಲ್ಲಿದ್ದಾರೆ.

Related