ಇಂದು ನಾಮಪತ್ರ ಸಲ್ಲಿಸಲಿರುವ ರಾಹುಲ್ ಗಾಂಧಿ

ಇಂದು ನಾಮಪತ್ರ ಸಲ್ಲಿಸಲಿರುವ ರಾಹುಲ್ ಗಾಂಧಿ

ದಿನದಿಂದ ದಿನಕ್ಕೆ ಲೋಕಸಭಾ ಚುನಾವಣೆ ಕಣ ಬಿಸಿಲಿನ ಕಾವಿನಂತೆ ರಂಗೇರುತ್ತಿದ್ದು, ರಾಜ ಮಾತ್ರವಲ್ಲದೆ ಇಡೀ ದೇಶದಾದ್ಯಂತ ಚುನಾವಣೆಯ ಕಾವು ಹೆಚ್ಚಾಗುತ್ತಿದೆ.

ಇಡೀ ದೇಶದಾದ್ಯಂತ ಎಲ್ಲಾ ಪಕ್ಷದ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುವುದರ ಜೊತೆಗೆ ಭರ್ಜರಿ ಬಿರುಸಿನ ಪ್ರಚಾರವನ್ನು ಕೈಗೊಂಡಿದ್ದಾರೆ.

ಹೌದು, ಕಾಂಗ್ರೆಸ್ ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿಯವರು ಲೋಕಸಭಾ ಚುನಾವಣೆಗೆಂದು ಇಂದು ಕೇರಳದ ವಯನಾಡಿನಲ್ಲಿ ತಮ್ಮ ನಾಮ ಪತ್ರವನ್ನು ಸಲ್ಲಿಸಲಿದ್ದಾರೆ.

ನಾಮಪತ್ರ ಸಲ್ಲಿಕೆಗೂ ಮುನ್ನ ಅವರು ವಯನಾಡ್‌ನಲ್ಲಿ ರೋಡ್ ಶೋ ನಡೆಸಿ ಸಂಜೆಯ ವೇಳೆಗೆ ದೆಹಲಿಗೆ ಹಿಂದಿರುಗಲಿದ್ದಾರೆ. ಮಾಜಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಪುತ್ರ ರಾಹುಲ್ ಗಾಂಧಿ ಅವರು ಈ ಸಾರ್ವತ್ರಿಕ ಚುನಾವಣೆಯಲ್ಲಿ ಸಿಪಿಐ ಪ್ರಧಾನ ಕಾರ್ಯದರ್ಶಿ ಡಿ ರಾಜಾ ಅವರ ಪತ್ನಿ ಮತ್ತು ಸಿಪಿಐ ಅಭ್ಯರ್ಥಿ ಅನ್ನಿ ರಾಜಾ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಕೆ ಸುರೇಂದ್ರನ್ ವಿರುದ್ಧ ಸ್ಪರ್ಧಿಸುತ್ತಿದ್ದಾರೆ.

 

Related