ವಿತರಕರ ವಿರುದ್ಧ ರೈತ ಸಂಘ ಪ್ರತಿಭಟನೆ

ವಿತರಕರ ವಿರುದ್ಧ ರೈತ ಸಂಘ ಪ್ರತಿಭಟನೆ

ಲಿಂಗಸುಗೂರು: ರೈತರಿಗೆ ಕಳಪೆ ಬೀಜ ಪೂರೈಕೆ ಮಾಡಿದ ವಿತರಕರ ವಿರುದ್ಧ ಕ್ರಮ ಕೈಗೊಳ್ಳದ ಕೃಷಿ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಸಹಾಯಕ ಆಯುಕ್ತರ ಕಚೇರಿ ಆವರಣದಲ್ಲಿ ಪ್ರತಿಭಟನೆ ಮಾಡಿದರು.

ಸಿಂಧನೂರು ತಾಲೂಕಿನ ಸೂರ್ಯ ಆಗ್ರೋ ವಿತರಕರು ಕಳೆದ ಮಾರ್ಚ್ 10 ರಂದು ಕಳಪೆ ಬಿತ್ತನೆ ಬೀಜ ಪೂರೈಕೆ ಮಾಡಿದ್ದರಿಂದ ನೂರಾರು ರೈತರ ಫಸಲು ಕೈಗೆ ಬಾರದೆ ಸಂಕಷ್ಟ ಅನುಭವಿಸುತ್ತಿದ್ದಾರೆ. ಈ ಬಗ್ಗೆ ಮಾಚ್ 10ರಂದು ವಿತರಕರ ವಿರುದ್ಧ ಕ್ರಮ ಕೈಗೊಂಡು ರೈತರಿಗೆ ಪರಿಹಾರ ನೀಡಬೇಕೆಂದು ಲಿಖಿತ ದೂರು ಸಲ್ಲಿಸಲಾಗಿತ್ತು. ಆದರೆ ಇಲ್ಲಿಯವರೆಗೂ ಯಾವುದೇ ಕ್ರಮ ಕೈಗೊಳ್ಳದೇ ರೈತರನ್ನು ವಂಚಿಸುತ್ತಿರುವ ಸಹಾಯಕ ಕೃಷಿ ನಿರ್ದೇಶಕ ಹಾಗೂ ಉಪ ನಿರ್ದೇಶಕರ ವಿರುದ್ಧ ಸೂಕ್ತ ಕಾನೂನು ಕ್ರಮಕೈಗೊಳ್ಳಬೇಕು ಹಾಗೂ ರೈತರಿಗೆ ಶೀಘ್ರವಾಗಿ ಪರಿಹಾರ ನೀಡಬೇಕು. ಇಲ್ಲವಾದಲ್ಲಿ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದೆಂದು ಮನವಿ ಪತ್ರ ಮೂಲಕ ಎಚ್ಚರಿಸಿದರು.

ರೈತ ಸಂಘದ ತಾಲ್ಲೂಕು ಅಧ್ಯಕ್ಷ ಶಿವಪುತ್ರಗೌಡ ಪಾಟೀಲ್, ಬಸನಗೌಡ ಹಿರೇಹೆಸರೂರು, ಸದಾನಂದ ಮಡಿವಾಳ, ಆದಪ್ಪ, ಸಂಗನಗೌಡ, ಖಾಜಾವಲಿ, ಮಲ್ಲಿಕಾರ್ಜುನ, ಸಂಗಪ್ಪ ಬಳಿಗೇರ, ಹುಲ್ಲಪ್ಪ ಸೇರಿ ಇತರರು ಇದ್ದರು.

Related