ಕನ್ನಡದಲ್ಲೂ ಶುರುವಾಗಲಿದೆ ರಾಮ್ ಗೋಪಾಲ್ ಸಿನಿಮಾ..

  • In Cinema
  • July 11, 2022
  • 208 Views
ಕನ್ನಡದಲ್ಲೂ ಶುರುವಾಗಲಿದೆ ರಾಮ್ ಗೋಪಾಲ್ ಸಿನಿಮಾ..

ಹೊಸತನದ ಹೆಜ್ಜೆಗಳನ್ನು ಇಡುವ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಈಗ ಸಮರ ಕಲೆಯಾಧಾರಿತ ಪ್ಯಾನ್ ಇಂಡಿಯಾ ಸಿನಿಮಾ ಮಾಡಿದ್ದು, ಆ ಚಿತ್ರಹುಡುಗಿ ಎಂಬ ಶೀರ್ಷಿಕೆಯಡಿ ಕನ್ನಡದಲ್ಲೂ ರಿಲೀಸ್ ಮಾಡಲಾಗುತ್ತಿದೆ. ಇದೇ 15ಕ್ಕೆ ಚಿತ್ರ ತೆರೆಗೆ ಬರುತ್ತಿದ್ದು, ಈ ಹಿನ್ನೆಲೆ ರಾಮ್ ಗೋಪಾಲ್ ಬೆಂಗಳೂರಿನಲ್ಲಿ ಸಿನಿಮಾ ಪ್ರಚಾರ ನಡೆಸಿದರು.

ಬೆಂಗಳೂರಿನಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಿರ್ದೇಶಕ ರಾಮ್ ಗೋಪಾಲ್ ವರ್ಮಾ, ಇದು ತುಂಬಾ ವಿಶೇಷವಾದ ಸಿನಿಮಾ. ನಾನು ಚಿಕ್ಕವನಿದ್ದಾಗ ಎಂಟರ್ ದಿ ಡ್ರ್ಯಾಗನ್ ಸಿನಿಮಾ ನೋಡಿದ್ದೆ. ಆ ಕಥೆಯ ನಾಯಕಬ್ರೂಸ್ಲಿಯಿಂದ ಸ್ಪೂರ್ತಿಯಿಂದ ಈ ಸಿನಿಮಾ ಮಾಡಿದ್ದು, ಮಾರ್ಷಲ್ ಆರ್ಟ್ಸ್ ಗೆ ಸಂಬಂಧಪಟ್ಟ ಸಿನಿಮಾವಾಗಿದ್ದು, ಈ ಕಲೆ ಮಾಡುವವರ ಸಂಖ್ಯೆ ತೀರಾ ವಿರಳ. ಅದರಲ್ಲೂ ಹೆಣ್ಣು ಮಕ್ಕಳು ಮಾಡೋದುಕಡಿಮೆ. ನಾಯಕಿ ಪೂಜಾ ಹನ್ನೆರೆಡು ವರ್ಷದಿಂದ ಸಮರಕಲೆ ಅಭ್ಯಾಸ ಮಾಡ್ತಿದ್ದು, ಹೀಗಾಗಿ ಆಕೆಯನ್ನು ನಾಯಕಿಯನ್ನು ಆಕೆ ಮಾಡಲಾಗಿದೆ. ಟ್ರಯಾಂಗಲ್ ಲವ್ ಸ್ಟೋರಿ ಕೂಡ ಸಿನಿಮಾದಲ್ಲಿದೆ ಎಂದು ತಿಳಿಸಿದರು.

ಹುಡುಗಿ ಸಿನಿಮಾ ಮಹಿಳಾ ಪ್ರಧಾನ ಸಿನಿಮಾವಾಗಿದ್ದು, ಮಾರ್ಷಲ್ ಆರ್ಟ್ಸ್ ಹಿನ್ನೆಲೆಯಲ್ಲಿ ತಯಾರಾಗಿರುವ ಈ ಚಿತ್ರದಲ್ಲಿ ಸಿನಿಮಾದಲ್ಲಿ ಪೂಜಾ ಭಾಲೇಕರ್ ನಾಯಕಿಯಾಗಿ ನಟಿಸಿದ್ದಾರೆ. ಭಾರತ ಹಾಗೂ ಚೀನಾದಲ್ಲಿ ಚಿತ್ರ ಬಿಡುಗಡೆಯಾಗುತ್ತಿದೆ. ಈ ಸಿನಿಮಾ ಚೀನಾದಲ್ಲಿ  ಬಿಡುಗಡೆಯಾಗುತ್ತಿದೆ. ಆರ್ಟ್ಸಿ ಮೀಡಿಯಾ ಪ್ರೈವೇಟ್ ಲಿಮಿಟೆಡ್ ನಿರ್ಮಿಸಿರುವ ಈ ಚಿತ್ರ ತೆಲುಗು, ತಮಿಳು, ಮಲಯಾಳಂ, ಕನ್ನಡ ಮತ್ತು ಹಿಂದಿ ಭಾಷೆಯಲ್ಲಿ ಬೆಳ್ಳಿತೆರೆಗೆ ಜುಲೈ 15ಕ್ಕೆ ಗ್ರ್ಯಾಂಡ್ ಎಂಟ್ರಿ ಕೊಡಲಿದೆ.

Related