ಸ್ನೇಹಿತರ ಜೊತೆಗೂಡಿ ಅಪ್ರಾಪ್ತೆ ಮೇಲೆ ಅತ್ಯಾಚಾರ

ಸ್ನೇಹಿತರ ಜೊತೆಗೂಡಿ ಅಪ್ರಾಪ್ತೆ ಮೇಲೆ ಅತ್ಯಾಚಾರ

ಅಪ್ರಾಪ್ತೆಯನ್ನ ಆಕೆಯ ಬಾಯ್‌ಫ್ರೆಂಡ್ ಮತ್ತಾತನ ಗೆಳೆಯರೂ ಒಬ್ಬರಾದ ಮೇಲೆ ಒಬ್ಬರು ಅತ್ಯಾಚಾರ ಮಾಡಿದ್ದು ಮಾತ್ರವಲ್ಲದೇ ಅಶ್ಲೀಲ ವಿಡಿಯೋಗಳನ್ನೂ ತೆಗೆದ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ.

ಮದುವೆಯಾಗುತ್ತೇನೆ ಎಂದು ನಂಬಿಸಿದ್ದ ಗೆಳೆಯ ಒಂದು ವರ್ಷದಿಂದ ನನ್ನ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ಸಂತ್ರಸ್ತೆ ದೂರಿನಲ್ಲಿ ಉಲ್ಲೇಖಿಸಿದ್ದಾಳೆ. ಅತ್ಯಾಚಾರವೆಸಗಿದ್ದು ಮಾತ್ರವಲ್ಲದೇ ಆಕೆಯ ಅಶ್ಲೀಲ ಫೋಟೋ ಹಾಗೂ ವಿಡಿಯೋಗಳನ್ನ ಜನವರಿ 1ರಂದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ಆತ ನನ್ನನ್ನು ಬ್ಲಾಕ್‌ಮೇಲ್ ಮಾಡಿ ಪದೇ ಪದೇ ಅತ್ಯಾಚಾರ ಮಾಡುತ್ತಿದ್ದ. ಮಾತ್ರವಲ್ಲದೇ ಆತನ ಸ್ನೇಹಿತರು ನನ್ನ ಮೇಲೆ ಅತ್ಯಾಚಾರಗೈದಿದ್ದಾರೆ ಎಂದು ಆರೋಪಿಸಿದ್ದಾಳೆ.

ಆರೋಪಿಗಳು ಹರಿಬಿಟ್ಟ ವಿಡಿಯೋಗಳು ವೈರಲ್ ಆದ ಬಳಿಕ ಸಂತ್ರಸ್ತೆಯ ಕುಟುಂಬ ದೂರು ದಾಖಲಿಸಿದೆ. ಪ್ರಕರಣ ಸಂಬಂಧ  ಸಂತ್ರಸ್ತೆ  ಬಾಯ್‌ಫ್ರೆಂಡ್  ಹಾಗೂ  ಇತರೆ ನಾಲ್ವರು ಆರೋಪಿಗಳ ವಿರುದ್ಧ ಬರೇಲಿ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ವಿಡಿಯೋ ಶೇರ್ ಮಾಡಿದವರನ್ನೂ ಬಂಧಿಸಲು ಪೊಲೀಸರು ಬಲೆ ಬೀಸಿದ್ದಾರೆ.

Related