2025 ನೇ ಸಾಲಿನಲ್ಲಿ ಐಪಿಎಲ್ ಪಂದ್ಯಾವಳಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಉತ್ತಮ ಪ್ರದರ್ಶನ ನೀಡುತ್ತಿದ್ದು, ಇಂದು (ಗುರುವಾರ ಮೇ 29) ರಂದು ನಡೆದ ಪಂದ್ಯಾವಳಿಯಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಭರ್ಜರಿ ಜಯ ಸಾಧಿಸಿದೆ.
ಪಂಜಾಬ್ ಕಿಂಗ್ಸ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಮಂಡಿಯೂರಿದೆ. 14.1 ಓವರ್ಗೆ ಆಲೌಟ್ ಆಗಿರುವ ಪಂಜಾಬ್ ಕಿಂಗ್ಸ್ ಕೇವಲ 101 ರನ್ಗಳ ಗುರಿಯನ್ನು ಆರ್ಸಿಬಿಗೆ ನೀಡಿದೆ. ಸೆಮಿಸ್ನಲ್ಲಿ ಭರ್ಜರಿ ಬೌಲಿಂಗ್ ಪ್ರದರ್ಶನ ಮಾಡಿದೆ ಇದು ಆರ್ಸಿಬಿಗೆ ಜಯವಾಗಿದೆ.
ಚಂಢಿಗಡದ ಮುಲ್ಲನಪುರದ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ ಪಂದ್ಯದಲ್ಲಿ ಆರ್ಸಿಬಿ ನಾಯಕ ರಜತ್ ಪಾಟಿದಾರ್ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿದರು.
ಕೇವಲ 102 ರನ್ನು ಬೆನ್ನತ್ತಿದ ಆರ್ಸಿಬಿ ತಂಡವು ಭರ್ಜರಿ ಜಯ ಗಳಿಸುವ ಮೂಲಕ 18ನೇ ಆವೃತ್ತಿಯಲ್ಲಿ ಫೈನಲ್ ಗೆ ಲಗ್ಗೆ ಇಟ್ಟಿದೆ.
