ಗೆಲುವಿನ ನಗೆ ಬಿರಿದ ಆರ್‌ಸಿಬಿ

ಗೆಲುವಿನ ನಗೆ ಬಿರಿದ ಆರ್‌ಸಿಬಿ

ಇಂಡಿಯನ್ ಪ್ರೀಮಿಯಂ ಲೀಗ್ 45ರ ಪಂದ್ಯದಲ್ಲಿ ಆರ್‌ಸಿಬಿ 10 ಪಂದ್ಯಗಳಲ್ಲಿ ಮೂರು ಪಂದ್ಯ ಗೆದ್ದಿದ್ದು ನಿನ್ನೆ ನಡೆದ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಭರ್ಜರಿ ಗೆಲುವು ದಾಖಲಿಸಿ ಐಪಿಎಲ್ ಇತಿಹಾಸದಲ್ಲೇ ಅತಿ ಹೆಚ್ಚು ಎಸೆತಗಳ ಬಾಕಿ ಉಳಿಸಿ 200 ಪ್ಲಸ್ ರನ್ಗಳನ್ನು ಚೇಸ್ ಮಾಡಿ ಭರ್ಜರಿ ಜಯಭೇರಿ ಸಾಧಿಸಿದೆ.

ಹೌದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಭರ್ಜರಿ ಜಯ ಸಾಧಿಸಿದೆ. ಅಹಮದಾಬಾದ್​ನಲ್ಲಿ ನಡೆದ ಗುಜರಾತ್ ಟೈಟಾನ್ಸ್ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಫಾಫ್ ಡುಪ್ಲೆಸಿಸ್ ಬೌಲಿಂಗ್ ಆಯ್ದುಕೊಂಡಿದ್ದರು.

ಅದರಂತೆ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ ಪರ ಸಾಯಿ ಸುದರ್ಶನ್ (84) ಹಾಗೂ ಶಾರುಖ್ ಖಾನ್ (58) ಅರ್ಧಶತಕ ಬಾರಿಸಿ ಮಿಂಚಿದ್ದರು. ಈ ಅರ್ಧಶತಕಗಳ ನೆರವಿನಿಂದ ಗುಜರಾತ್ ಟೈಟಾನ್ಸ್ ತಂಡವು 20 ಓವರ್​ಗಳಲ್ಲಿ 3 ವಿಕೆಟ್ ಕಳೆದುಕೊಂಡು 200 ರನ್​ಗಳನ್ನು ಕಲೆಹಾಕಿತು. ಇದನ್ನೂ ಓದಿ: ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್ ನಿಧನ

201 ರನ್​ಗಳ ಸ್ಪರ್ಧಾತ್ಮಕ ಗುರಿ ಬೆನ್ನತ್ತಿದ ಆರ್​ಸಿಬಿ ತಂಡಕ್ಕೆ ವಿರಾಟ್ ಕೊಹ್ಲಿ (70) ಹಾಗೂ ಫಾಫ್ ಡುಪ್ಲೆಸಿಸ್ (24) ಉತ್ತಮ ಆರಂಭ ಒದಗಿಸಿದ್ದರು. ಇನ್ನು 3ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ವಿಲ್ ಜಾಕ್ಸ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು.

ಆರಂಭದಲ್ಲಿ ಎಚ್ಚರಿಕೆಯ ಆಟವಾಡಿದ ಜಾಕ್ಸ್ 31 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಆದರೆ ಹಾಫ್ ಸೆಂಚುರಿ ಪೂರ್ಣಗೊಳ್ಳುತ್ತಿದ್ದಂತೆ ಅಬ್ಬರಿಲಾರಂಭಿಸಿದರು. ಪರಿಣಾಮ ಮುಂದಿನ 10 ಎಸೆತಗಳಲ್ಲಿ 50 ರನ್​ ಕಲೆಹಾಕುವ ಮೂಲಕ ಕೇವಲ 41 ಬಾಲ್​ಗಳಲ್ಲಿ ಸೆಂಚುರಿ ಸಿಡಿಸಿದರು. ಈ ಮೂಲಕ 16 ಓವರ್​ಗಳಲ್ಲಿ ಆರ್​ಸಿಬಿ ತಂಡಕ್ಕೆ ಗೆಲುವು ತಂದುಕೊಟ್ಟರು.

ಈ ಗೆಲುವಿನೊಂದಿಗೆ ಐಪಿಎಲ್ ಇತಿಹಾಸದಲ್ಲಿ ಅತೀ ಹೆಚ್ಚು ಎಸೆತಗಳು ಬಾಕಿ ಉಳಿಸಿ 200+ ರನ್​ಗಳನ್ನು ಚೇಸ್ ಮಾಡಿದ ಭರ್ಜರಿ ದಾಖಲೆಯೊಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪಾಲಾಗಿದೆ. ಇದಕ್ಕೂ ಮುನ್ನ ಈ ದಾಖಲೆ ಮುಂಬೈ ಇಂಡಿಯನ್ಸ್ ತಂಡದ ಹೆಸರಿನಲ್ಲಿತ್ತು.

2023 ರಲ್ಲಿ ಮುಂಬೈ ಇಂಡಿಯನ್ಸ್ ತಂಡವು ಆರ್​ಸಿಬಿ ವಿರುದ್ಧ 21 ಎಸೆತಗಳನ್ನು ಬಾಕಿ ಉಳಿಸಿ 200 ರನ್​ಗಳನ್ನು ಚೇಸ್ ಮಾಡಿ ಭರ್ಜರಿ ಜಯ ಸಾಧಿಸಿತ್ತು. ಇದೀಗ ಈ ದಾಖಲೆಯನ್ನು ಮುರಿಯುವಲ್ಲಿ ಆರ್​ಸಿಬಿ ಯಶಸ್ವಿಯಾಗಿದೆ.

 

Related