ಜಾತಿ, ಧರ್ಮ ಯಾವುದೇ ಆಗಿರಲಿ ಮೊದಲು ನಾವು ಮಾನವರು: ರಚಿತಾ ರಾಮ್‌

ಜಾತಿ, ಧರ್ಮ ಯಾವುದೇ ಆಗಿರಲಿ ಮೊದಲು ನಾವು ಮಾನವರು: ರಚಿತಾ ರಾಮ್‌

ಬೆಂಗಳೂರು: ವಿದ್ಯಾರ್ಥಿ ನೇಹಾ ಹತ್ಯೆ ಖಂಡಿಸಿ ರಾಜದಾದ್ಯಂತ ಹಲವು ಸಂಘಟನೆಗಳು ಪ್ರತಿಭಟನೆಗೆ ಮುಂದಾಗಿದ್ದು, ನಟಿ ರಚಿತರಾಮ್ ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕುವ ಮೂಲಕ ನೇಹಾ ಅವರಿಗೆ ಆಗಿರುವ ಅನ್ಯಾಯಕ್ಕೆ ಅವರ ಕುಟುಂಬಕ್ಕೆ ತೋರಿತವಾಗಿ ನ್ಯಾಯ ಒದಗಿಸಬೇಕೆಂದು ಪೋಸ್ಟ್ ಮಾಡಿದ್ದಾರೆ.

ಇನ್‌ಸ್ಟಾಗ್ರಾಂ ನಲ್ಲಿ ಪೋಸ್ಟ್‌ ಹಾಕಿರುವ ರಚಿತಾ ರಾಮ್‌ ಅವರು, ಈ ರೀತಿಯ ಕೃತ್ಯ ಮಾಡುವವರನ್ನು ಗಲ್ಲಿಗೇರಿಸುವ ಬದಲು ಅವರನ್ನು ಜನಸಾಮಾನ್ಯರ ಕೈಗೆ ಒಪ್ಪಿಸಿ ಎಂದು ಒತ್ತಾಯಿಸಿದ್ದಾರೆ.

ಜಾತಿ, ಧರ್ಮ ಯಾವುದೇ ಆಗಿರಲಿ. ಮೊದಲು ನಾವು ಮಾನವರು. ನಾನು ಈ ಪೋಸ್ಟ್‌ ಹಾಕಲು ಕಾರಣ ಆಕೆಗೆ (ನೇಹಾ) ಆಗಿರುವ ಅನ್ಯಾಯ. ತಪ್ಪು ಯಾರೇ ಮಾಡಿದರು ತಪ್ಪೆ ಎಂದು ನಟಿ ಅಭಿಪ್ರಾಯಪಟ್ಟಿದ್ದಾರೆ.

ಸರ್ಕಾರಕ್ಕೆ ನನ್ನ ಒಂದು ಮನವಿ. ರಾಜಕೀಯ ಆಯಾಮದಲ್ಲಿ ಈ ವಿಷಯವನ್ನು ತರಬೇಡಿ. ಆಗಿರೋದು ಅನ್ಯಾಯ. ಈಗ ನ್ಯಾಯ ಬೇಕಾಗಿದೆ ಅಷ್ಟೆ. ಈ ರೀತಿಯ ಕೃತ್ಯ ಮಾಡುವವರನ್ನು ಗಲ್ಲಿಗೇರಿಸುವ ಬದಲು ಅವರನ್ನು ಜನಸಾಮಾನ್ಯರ ಕೈಗೆ ಒಪ್ಪಿಸಿ ಎಂದು ಒತ್ತಾಯಿಸಿದ್ದಾರೆ.

ಕೊಲೆಯಾದ ನೇಹಾ ಹಿರೇಮಠ್‌ ಫೋಟೊ ಜೊತೆಗೆ ಈ ಪೋಸ್ಟ್‌ ಅನ್ನು ಹಂಚಿಕೊಂಡಿದ್ದಾರೆ. ಅಲ್ಲದೇ #wewantjustice ಎಂದು ಟ್ಯಾಗ್‌ ಕೂಡ ಹಾಕಿದ್ದಾರೆ.

 

Related