ಇಂದಿರಾ ಗಾಂಧಿ ಪುಣ್ಯಸ್ಮರಣೆ

ಇಂದಿರಾ ಗಾಂಧಿ ಪುಣ್ಯಸ್ಮರಣೆ

ಬೆಂಗಳೂರು : ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಪುಣ್ಯತಿಥಿ ಹಾಗೂ ಸರ್ದಾರ್ ವಲ್ಲಭಭಾಯಿ ಪಟೇಲರ ಜನ್ಮದಿನ ಅಂಗವಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಶನಿವಾರ ಬೆಂಗಳೂರಿನ ಕ್ವೀನ್ಸ್ ರಸ್ತೆಯ ಪಕ್ಷದ ಕಚೇರಿಯಲ್ಲಿ ಇಬ್ಬರು ನಾಯಕರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ರಾಜ್ಯಸಭಾ ಸದಸ್ಯ ಮಲ್ಲಿಕಾರ್ಜುನ ಖರ್ಗೆ, ವಿಧಾನ ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್, ಮಾಧ್ಯಮ ವಿಭಾಗ ಮುಖ್ಯಸ್ಥ ಬಿ.ಎಲ್ ಶಂಕರ್, ಮತ್ತಿತರು ನಾಯಕರು ಇದ್ದರು.

Related