ಎಪಿಎಂಸಿ ಕಾಯ್ದೆ ತಿದ್ದುಪಡಿ ಹಿಂಪಡೆಯಿರಿ!

ಎಪಿಎಂಸಿ ಕಾಯ್ದೆ ತಿದ್ದುಪಡಿ ಹಿಂಪಡೆಯಿರಿ!

ಜೇವರ್ಗಿ : ಕೃಷಿ ಉತ್ಪನ್ನ ಮಾರುಕಟ್ಟೆಗಳನ್ನೇ ನಂಬಿ ಬದುಕು ಕಟ್ಟಿಕೊಂಡಿರುವ ಲಕ್ಷಾಂತರ ಹಮಾಲಿ ಕಾರ್ಮಿಕರ ಉದ್ಯೋಗವನ್ನು ಕಸಿಯುವ ಮತ್ತು ಸೌಲಭ್ಯಗಳಿಂದ ವಂಚಿಸಲಿರುವ ಎ.ಪಿ.ಎಂ.ಸಿ ಕಾಯ್ದೆ ತಿದ್ದುಪಡಿ ಸುಗ್ರೀವಾಜ್ಞೆಯನ್ನು ಕೂಡಲೇ ಹಿಂದಕ್ಕೆ ಪಡೆದುಕೊಳ್ಳುವಂತೆ ಆಗ್ರಹಿಸಿ, ಇಲ್ಲಿ ಅಖಂಡೇಶ್ವರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಹಮಾಲಿ ಕಾರ್ಮಿಕರ ಸಂಘದ ನೇತೃತ್ವದಲ್ಲಿ ಹಮಾಲಿ ಕಾರ್ಮಿಕರು ಪ್ರತಿಭಟನೆ ನಡೆಸಿದರು.

ಲಾಕ್‌ಡೌನ್‌ನಿಂದಾಗಿ ಉದ್ಯೋಗ ಕಳೆದುಕೊಂಡು ಸಂಕಷ್ಟಕ್ಕೀಡಾದ ಎಲ್ಲಾ ಹಮಾಲಿ ಕಾರ್ಮಿಕರಿಗೆ ತಿಂಗಳಿಗೆ 7,500 ಆರ್ಥಿಕ ನೆರವು ನೀಡಬೇಕು. ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯಿಂದ ಎಲ್ಲಾ ನಗರ, ಗ್ರಾಮೀಣ, ಬಜಾರ ಹಮಾಲಿ ಕಾರ್ಮಿಕರಿಗೆ ಭವಿಷ್ಯನಿಧಿ ಯೋಜನೆ ಪಿಂಚಣಿ ಜಾರಿ ಮಾಡಬೇಕು. ಹಮಾಲಿ ಕಾರ್ಮಿಕರಿಗೆ ಮನೆಗಳನ್ನು ನಿರ್ಮಿಸಿಕೊಡಬೇಕು.

ಕಾರ್ಮಿಕರಿಗೆ ಇಎಸ್ಐ, ಪಿ.ಎಫ್ ಹಾಗೂ ಕನಿಷ್ಠ ವೇತನ ಮತ್ತು ಬೋನಸ್ ಜಾರಿಗೊಳಿಸಬೇಕು ಎಂದು ಹಮಾಲಿ ಕಾರ್ಮಿಕರು ಒತ್ತಾಯಿಸಿದರು. ನಂತರ ಮಿನಿ ವಿಧಾನಸೌಧಕ್ಕೆ ತೆರಳಿ ಪ್ರಮುಖ 8 ಬೇಡಿಕೆಗಳ ಮನವಿಪತ್ರವನ್ನು ತಹಶೀಲ್ದಾರ್ ಸಿದರಾಯ ಬೋಸಗಿ ಮುಖಾಂತರ ರಾಜ್ಯ ಸರ್ಕಾರಕ್ಕೆ ಸಲ್ಲಿಸಿದರು.

Related