ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ ರಾಕಿಬಾಯ್

ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ ರಾಕಿಬಾಯ್

ಬೆಂಗಳೂರು: ಕೆಜಿಎಫ್ ಚಿತ್ರದ ಮೂಲಕ ಕನ್ನಡ ಚಿತ್ರರಂಗದ ನಾಯಕನಟ ಯಶ್ ಫ್ಯಾನ್ ಇಂಡಿಯಾ ಹೀರೋ ಆಗಿ ಮಿಂಚುತ್ತಿದ್ದಾರೆ. ಕೆಜಿಎಫ್ ಚಾಪ್ಟರ್ 2 ನಂತರ ರಾಕಿ ಬಾಯ್ ಅಭಿಮಾನಿಗಳಿಗೆ ಸಿಹಿ ಸುದ್ದಿಯನ್ನು ನೀಡಿದ್ದಾರೆ.

ಹೌದು ಸ್ಯಾಂಡಲ್ ವುಡ್ ನಲ್ಲಿ ಅತಿ ಬೇಗನೆ ಬೆಳೆದ ನಟ ಎಂದರೆ ಅದು ಯಶ್. ಯಶ್‌ ಈಗ ಫ್ಯಾನ್ ಇಂಡಿಯಾ ಹೀರೋ ಆಗಿ ಮಿಂಚುತ್ತಿದ್ದಾರೆ. ಇದೀಗ ಯಶ್ ಅವರು ಮತ್ತೊಂದು ಚಿತ್ರದಲ್ಲಿ ನಟಿಸುತ್ತಿದ್ದಾರೆ ಎಂಬ ಮಾಹಿತಿಯನ್ನು ಅಭಿಮಾನಿಗಳಿಗೆ ನೀಡಿದ್ದು ಅಭಿಮಾನಿಗಳು ಫುಲ್ ಖುಷಿಯಾಗಿದ್ದಾರೆ. ಇಷ್ಟು ದಿನ ತೆರೆಮೆರೆಯಲ್ಲಿ ತಮ್ಮ ಹೊಸ ಸಿನಿಮಾದ ಕೆಲಸ ಮಾಡುತ್ತಿದ್ದ ಯಶ್, ಡಿ.4 ರಿಂದ ಅಭಿಮಾನಿಗಳಿಗೆ ದಿನಕ್ಕೊಂದು ಹೊಸ ಸುದ್ದಿ ನೀಡುತ್ತಿದ್ದಾರೆ.

ನಿನ್ನೆಯಷ್ಟೇ ಲೋಡಿಂಗ್ ಎಂದು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದವರು, ಇಂದು ತಮ್ಮ ಹೊಸ ಸಿನಿಮಾದ ಟೈಟಲ್ ಘೋಷಣೆ ಮಾಡುವ ಬಗ್ಗೆ ಮಾಹಿತಿ ನೀಡಿದ್ದಾರೆ. ಡಿಸೆಂಬರ್ 8ರಂದು ಮುಂಜಾನೆ 9.55ಕ್ಕೆ ಹೊಸ ಸಿನಿಮಾದ ಶೀರ್ಷಿಕೆ ಅನಾವರಣ ಮಾಡುವುದಾ ತಿಳಿಸಿದ್ದಾರೆ.

ಕೆಜಿಎಫ್, ಕೆಜಿಎಫ್ 2 ಸಕ್ಸಸ್ ಬಳಿಕ ಯಶ್ ಸೈಲೆಂಟ್ ಆಗಿ ಮುಂದಿನ ಸಿನಿಮಾಗೆ ಭರ್ಜರಿ ತಯಾರಿ ಮಾಡಿಕೊಳ್ತಾ ಇದ್ದರು. ‘ಲೋಡಿಂಗ್‘ಎಂಬ ಬರಹದ ಫೋಟೋವನ್ನ ನಿನ್ನೆ ಇನ್ಸ್ಟಾಗ್ರಾಂ ಮುಖಪುಟ ಬದಲಿಸಿದ್ದಾರೆ ಯಶ್.

 

Related