ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಕಳೆದ ಎರಡು ವರ್ಷಗಳಿಂದ ನಿಗಮಗಳಲ್ಲಿ ಅಕ್ರಮ ಹಣ ವರ್ಗಾವಣೆ ಹಾಗೂ ಅಕ್ರಮವಾಗಿ ಹಣ ದುರುಪಯೋಗ ಪಡಿಸಿಕೊಳ್ಳುತ್ತಿರುವುದು ಬೆಳಕಿಗೆ ಬಂದಿದ್ದು ಕರ್ನಾಟಕ ಜನತೆಗೆ ಗೊತ್ತಿರುವ ಸಂಗತಿ.
ಅದರಂತೆ ಮತ್ತೆ ಇದೀಗ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದಲ್ಲಿ ಸುಮಾರು 97 ಕೋಟಿ ಹಣ ಅಕ್ರಮವಾಗಿದೆ ಎಂಬ ಮಾಹಿತಿ ಇದೀಗ ಬಟಾ ಬಯಲಾಗಿದೆ.
ಹೌದು, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದಲ್ಲಿ 97 ಕೋಟಿ ಅಕ್ರಮ ಎಸಯಲಾಗಿದೆ ಎಂದು ಇಡಿ ಅಧಿಕಾರಿಗಳು ಅಧಿಕೃತ ಮಾಹಿತಿಯನ್ನು ಹೊರ ಹಾಕಿದ್ದಾರೆ. ಇದನ್ನೂ ಓದಿ: ಮಾಪಣ್ಣ ಕೊಲೆ ಪ್ರಕರಣ; ಮತ್ತಿಬ್ಬರು ಆರೋಪಿಗಳ ಬಂಧನ
ಇನ್ನು ಬೋವಿ ನಿಗಮದ ಮೇಲೆ ಇಡಿ ದಾಳಿ ನಂತರ ನಿಗಮದಲ್ಲಿ 97 ಕೋಟಿ ಹಣ ಅಕ್ರಮವಾಗಿ ಬೇರೆಯವರ ಖಾತೆಗಳಿಗೆ ವರ್ಗಾವಣೆಯಾಗಿದೆ ಎಂಬ ಮಾಹಿತಿ ಹೊರಬಿದ್ದಿದೆ.
ನಕಲಿ ಫಲಾನುಭವಿಗಳ ಬ್ಯಾಂಕ್ ಖಾತೆ ಬಳಸಿಕೊಂಡು ಹಣ ವರ್ಗಾವಣೆ ಮಾಡಲಾಗಿದೆ. ಕೆಬಿಡಿಸಿಯಿಂದ ಹಣವನ್ನು ಬೇರೆಡೆಗೆ ವರ್ಗಾವಣೆ ಮಾಡಲಾಗಿದೆ. ದಾಳಿ ವೇಳೆ ಸಂಗ್ರಹಿಸಿದ ಪುರಾವೆಗಳ ಆಧಾರದ ಮೇಲೆ ಮಾಜಿ ಎಂಡಿ ನಾಗರಾಜಪ್ಪನನ್ನು ವಶಕ್ಕೆ ಪಡೆಯಾಲಾಗಿದ್ದು, ಅಕ್ರಮ ಹಣ ವರ್ಗಾವಣೆಯಲ್ಲಿ ಭಾಗಿಯಾಗಿರುವುದು ಪತ್ತೆಯಾಗಿದೆ. ನಕಲಿ ಖಾತೆಗಳನ್ನು ಬಳಸಿಕೊಂಡು ತಮ್ಮ ಸ್ನೇಹಿತರು ಮತ್ತು ಕುಟುಂಬ ಸದಸ್ಯರ ಬ್ಯಾಂಕ್ ಖಾತೆಗಳಲ್ಲಿ ಹಣ ವರ್ಗಾವಣೆ ಮಾಡಿದ್ದಾರೆ.
ಸದ್ಯ ನಾಗರಾಜಪ್ಪನನ್ನು ಬಂಧಿಸಿ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಿದ ಇ.ಡಿ ಹೆಚ್ಚಿನ ತನಿಖೆಗಾಗಿ ನಾಗರಾಜಪ್ಪನನ್ನು 14 ದಿನ ವಶಕ್ಕೆ ಪಡೆದಿದೆ.
