ಶಾಲಾ ಮಕ್ಕಳಿಗೆ ಇನ್ಮುಂದೆ ಸಿಗುತ್ತೆ ಈ ಆಹಾರ

ಶಾಲಾ ಮಕ್ಕಳಿಗೆ ಇನ್ಮುಂದೆ ಸಿಗುತ್ತೆ ಈ ಆಹಾರ

ಬೆಂಗಳೂರು: ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಮಕ್ಕಳಿಗೆ ಮೊಟ್ಟೆ, ಶೇಂಗಾಚಿಕ್ಕಿ ಮತ್ತು ಬಾಳೆಹಣ್ಣನ್ನು ವಾರದಲ್ಲಿ ಎರಡು ಬಾರಿ ನೀಡಲು ಮುಂದಾಗಿರುವ ರಾಜ್ಯ ಸರ್ಕಾರ.

ಮುಖ್ಯಮಂತ್ರಿ ಸಿದ್ದರಾಮಯ್ಯ ರವರು, ಈವರೆಗೂ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ 1ರಿಂದ 8ನೇ ತರಗತಿವರೆಗೂ ವಿದ್ಯಾರ್ಥಿಗಳಿಗೆ ವಾರದಲ್ಲಿ ಒಂದು ದಿನ ಮೊಟ್ಟೆ, ಶೇಂಗಾಚಿಕ್ಕಿ ಹಾಗೂ ಬಾಳೆಹಣ್ಣನ್ನು ವಿತರಿಸಲಾಗುತ್ತಿತ್ತು. ಇನ್ನು ಮುಂದೆ ವಾರದಲ್ಲಿ ಎರಡು ದಿನ ವಿತರಣೆ ಮಾಡಲಾಗುವುದು, ಇದರಿಂದ ವಿದ್ಯಾರ್ಥಿಗಳಿಗೆ ಅಪೌಷ್ಠಿಕತೆ ಉಂಟಾಗುವುದಿಲ್ಲ ಎಂದು ಸಿಎಂ ತಿಳಿಸಿದ್ದಾರೆ. ಅಲ್ಲದೆ ಈ ಯೋಜನೆಯನ್ನು 9 ಮತ್ತು 10ನೇ ತರಗತಿವರೆಗೂ ವಿಸ್ತರಿಸುವುದಾಗಿ ಪ್ರಕಟಿಸಿದೆ. ಹಾಗೂ 9 ಮತ್ತು10ನೇ ತರಗತಿ ವ್ಯಾಸಂಗ ಮಾಡುತ್ತಿರುವ ಒಟ್ಟು 60 ಲಕ್ಷ ಮಕ್ಕಳಿಗೆ 280 ಕೋಟಿ ಅನುದಾನವನ್ನು ಮೀಸಲಿಡುತ್ತೇವೆ ಎಂದು ತಿಳಿಸಿದ್ದಾರೆ.

ಮಕ್ಕಳಲ್ಲಿ ಉಂಟಾಗುವ ನ್ಯೂನತೆಯನ್ನುನಿವಾರಿಸುವ ಸಲುವಾಗಿ ಸುಮಾರು 33 ಲಕ್ಷ ವಿದ್ಯಾರ್ಥಿಗಳಿಗೆ 80 ಕೋಟಿ ರೂ. ವೆಚ್ಚದಲ್ಲಿ ಕಲಿಕಾ ಬಲವರ್ಧನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತದೆ. ಮರುಸಿಂಚನ ಎಂಬ ಯೋಜನೆಯಡಿ ಹಿಂದುಳಿದ 1 ಲಕ್ಷ ವಿದ್ಯಾರ್ಥಿಗಳಿಗೆ ಪ್ರೌಢ ಹಂತದ ಪರೀಕ್ಷೆಗಳಿಗೆ  ವಿಶೇಷ ತರಬೇತಿಯನ್ನು ನೀಡಲಾಗುವುದು.

ವರದಿ

ಅಜಯಕುಮಾರ.ಜಿ(ಸಂಪಿಗೆಹಳ್ಳಿ)

 

Related