ಸ್ಕೂಲ್ ಓಪನ್: ಸಂಜೆ ಮಾರ್ಗಸೂಚಿ ಬಿಡುಗಡೆ

  • In State
  • August 16, 2021
  • 347 Views
ಸ್ಕೂಲ್ ಓಪನ್: ಸಂಜೆ ಮಾರ್ಗಸೂಚಿ ಬಿಡುಗಡೆ

ಬೆಂಗಳೂರು: 9ರಿಂದ 10ನೇ ತರಗತಿವರೆಗೂ ಶಾಲೆ ಆರಂಭಿಸಲು ರಾಜ್ಯ ಸರ್ಕಾರ ಸಕಲ ಸಿದ್ಧತೆ ಮಾಡಲಾಗಿದೆ.
ಇಂದು ಸಂಜೆ ಮಾರ್ಗಸೂಚಿ ಬಿಡುಗಡೆ ಮಾಡಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದ್ದಾರೆ.ಬೆಂಗಳೂರಿನಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಎಂ ಕೂಡ ಶಾಲೆ ಪ್ರಾರಂಭ ಬಗ್ಗೆ ಘೋಷಿಸಿದ್ದಾರೆ. ಆಗಸ್ಟ್ 23 ರಿಂದ 9ರಿಂದ 12ನೇ ತರಗತಿವರೆಗಿನ ಶಾಲೆಗಳು ಪ್ರಾರಂಭವಾಗುತ್ತವೆ.
ಈಗಾಗಲೇ ಡಿಸಿಗಳ ಜೊತೆ ಮಾತುಕತೆ ನಡೆಸಿದ್ದು, ಎರಡು ಜಿಲ್ಲೆ ಹೊರತುಪಡಿಸಿ ಉಳಿದ ಕಡೆ ಪ್ರಾರಂಭಿಸಲಾಗುವುದು ಎಂದಿದ್ದಾರೆ. ಮಕ್ಕಳಿಗೆ ಮಾಸ್ಕ್ ಕಡ್ಡಾಯ, ಈ ಜವಾಬ್ದಾರಿಯನ್ನು ಶಿಕ್ಷಕರು ವಹಿಸಲಿದ್ದಾರೆ. ಶಿಕ್ಷಕರಿಂದಲೂ ಶಾಲೆ ಪ್ರಾರಂಭಕ್ಕೆ ಬೆಂಬಲವಿದೆ ಎಂದು ಹೇಳಿದರು.

Related