ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ..!

ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ..!

ಬೆಂಗಳೂರು, ಜುಲೈ 26 : ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದ ನಾಲ್ವರು ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಹಗರಣ ಬೆಳಕಿಗೆ ಬಂದ ಬಳಿಕ ಮೊದಲ ಬಾರಿಗೆ ಆರೋಪಿಗಳಿಗೆ ಜಾಮೀನು ನೀಡಲಾಗಿದೆ.

ಶುಕ್ರವಾರ ಹೈಕೋರ್ಟ್ ಆರೋಪಿಗಳಾದ ರುದ್ರಪ್ಪ, ರಂಗನಾಥ್, ಓಬಳರಾಜು ಮತ್ತು ಮಂಜುನಾಥ್ ಅವರಿಗೆ ಷರತ್ತುಬದ್ಧ ಜಾಮೀನು ನೀಡಿದೆ. ಪ್ರತಿಯೊಬ್ಬ ಆರೋಪಿಗಳಿಗೂ 2 ಲಕ್ಷ ಬಾಂಡ್, ಇಬ್ಬರ ಶ್ಯೂರಿಟಿ ಆಧಾರದ ಮೇಲೆ ಜಾಮೀನು ನೀಡಲಾಗಿದೆ. ಪ್ರತಿ ಭಾನುವಾರ ಪೊಲೀಸ್ ಠಾಣೆಗೆ ಹೋಗಿ ಸಹಿ ಮಾಡಬೇಕು ಎಂದು ಆದೇಶ ನೀಡಿದೆ.
2016ರ ಮಾರ್ಚ್‌ನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆದಿತ್ತು. ಆದರೆ, ಮಾರ್ಚ್ 21 ಮತ್ತು 31 ರಂದು ಪಿಯುಸಿ ರಸಾಯನಶಾಸ್ತ್ರ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿತ್ತು. ಈ ಹಗರಣದ ತನಿಖೆಯನ್ನು ಸರ್ಕಾರ ಸಿಐಡಿ ತನಿಖೆಗೆ ಒಪ್ಪಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ 10ಕ್ಕೂ ಹೆಚ್ಚು ಆರೋಪಿಗಳನ್ನು ಬಂಧಿಸಲಾಗಿದೆ.

Related