ಡಿಕೆಶಿ ಭೇಟಿಯಾದ ಹ್ಯಾಟ್ರಿಕ್ ಹೀರೋ ಶಿವಣ್ಣ

ಡಿಕೆಶಿ ಭೇಟಿಯಾದ ಹ್ಯಾಟ್ರಿಕ್ ಹೀರೋ ಶಿವಣ್ಣ

ಬೆಂಗಳೂರು : ಖ್ಯಾತ ನಟ, ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಪತ್ನಿ ಗೀತಾ ಶಿವರಾಜ್ ಕುಮಾರ್ ಕೂಡ ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದಾರೆ. ಈ ಬಗ್ಗೆ ಸ್ವತಃ ಮಧು ಬಂಗಾರಪ್ಪ ಹೇಳಿಕೆ ನೀಡಿದ್ದರು.

ಇದರ ಬೆನ್ನಲ್ಲೇ ಇದೀಗ ನಟ ಶಿವರಾಜ್ ಕುಮಾರ್ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿದ್ದು, ಗೀತಾ ಶಿವರಾಜ್ ಕುಮಾರ್ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಚರ್ಚೆ ನಡೆಸಿದ್ದಾರೆ.

ನಟ ಶಿವರಾಜ್ ಕುಮಾರ್ ನಾನು ರಾಜಕೀಯ ಮಾತನಾಡಲು ಹೋಗಿಲ್ಲ. ವೈಯಕ್ತಿಕ ವಿಚಾರಕ್ಕೆ ಭೇಟಿ ನೀಡಿದ್ದೆ. ಇನ್ನು ಮಧು ಬಂಗಾರಪ್ಪ ಯಾವ ಪಕ್ಷಕ್ಕೆ ಸೇರಿದರೂ ಅವರಿಗೆ ಒಳ್ಳೆಯದಾಗಬೇಕು ಅಷ್ಟೇ ಎಂದು ಹೇಳಿದ್ದಾರೆ.

Related