ಬೆಂಗಳೂರು: ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ ಅವರಿಗೆ ಇಂದು ಹುಟ್ಟು ಹಬ್ಬದ ಸಂಭ್ರಮ. ಶಿವರಾಜ್ ಕುಮಾರ್ ಅಭಿಮಾನಿಗಳು ತಮ್ಮ ನೆಚ್ಚಿನ ನಟನಿಗೆ ಶುಭಾಶಯ ಕೋರಿದ್ದಾರೆ. ಅಲ್ಲದೆ ರಾಜಕೀಯ ರಂಗ ಹಾಗೂ ಸಿನಿಮಾ ರಂಗ ಸೇರಿದಂತೆ ಗಣ್ಯಾತಿ ಗಣ್ಯರು ನಟ ಶಿವರಾಜ್ ಕುಮಾರ್ ಅವರಿಗೆ ಹುಟ್ಟು ಹಬ್ಬದ ಶುಭ ಕೋರಿದ್ದಾರೆ.
ಇನ್ನು ಸಚಿವ ಎಂಬಿ ಪಾಟೀಲ್ ಅವರು ಕೂಡ ಶಿವರಾಜ್ ಕುಮಾರ್ ಅವರಿಗೆ ಹುಟ್ಟು ಹಬ್ಬದ ಶುಭ ಕೋರಿದ್ದಾರೆ. ತಮ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಅನ್ನು ಹಾಕಿರುವ ಅವರು, ಕರುನಾಡಿನ ಹೆಮ್ಮೆಯ ಕಲಾವಿದ, ಹ್ಯಾಟ್ರಿಕ್ ಹೀರೋ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು.
‘ಆನಂದ್” ಚಿತ್ರದಿಂದ ಆರಂಭಿಸಿ, ‘ದೊರೆ’, ‘ಭಜರಂಗಿ’, ಟಗರು, ಹೀಗೆ ಹಲವು ಚಿತ್ರಗಳಲ್ಲಿ ಅಭಿನಯಿಸಿ, ಪ್ರತಿಯೊಂದು ಪಾತ್ರಕ್ಕೂ ಜೀವ ತುಂಬಿದ ಕಲಾವಿದರು. ಸೂಪರ್ ಸ್ಟಾರ್ ಆಗಿದ್ದರೂ ಅಭಿಮಾನಿಗಳ ಮನದಲ್ಲಿ ‘ಶಿವಣ್ಣ’ ಎಂದೇ ಖ್ಯಾತರು. ಇದನ್ನೂ ಓದಿ: 63ನೇ ವಸಂತಕ್ಕೆ ಕಾಲಿಟ್ಟ ಶಿವಣ್ಣ
ಈ ವಿಶಿಷ್ಟ ಕಲಾಸಾಧಕರಿಗೆ ದೇವರು ಇನ್ನು ಹೆಚ್ಚಿನ ಕಲಾಸೇವೆ ಮಾಡಲು ಉತ್ತಮ ಆರೋಗ್ಯ ಮತ್ತು ಧೀರ್ಘಾಯುಷ್ಯ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಪೋಸ್ಟ್ ಮಾಡುವ ಮೂಲಕ ಶುಭಕೋರಿದ್ದಾರೆ.
