ಶಿವರಾತ್ರಿಗೆ ಕಿಚ್ಚ ಬಂಪರ್ ಗಿಫ್ಟ್

ಶಿವರಾತ್ರಿಗೆ ಕಿಚ್ಚ ಬಂಪರ್ ಗಿಫ್ಟ್

ಬೆಂಗಳೂರು,ಫೆ .17 : ಕಿಚ್ಚ ಸುದೀಪ್ ಅಭಿನಯದ ಕೋಟಿಗೊಬ್ಬ-3 ಚಿತ್ರ ಬಿಡುಗಡೆಗೆ ಸಿದ್ಧಗೊಳ್ಳುತ್ತಿದೆ. ಮೋಷನ್ ಪೋಸ್ಟರ್ ಸಖತ್ ಸದ್ದು ಮಾಡಿದ್ದು, ಈಗ ಚಿತ್ರ ತಂಡ ಟೀಸರ್ ರಿಲೀಸ್ ಮಾಡಲು ರೆಡಿ. ಹೌದು ಅಭಿನಯ ಚಕ್ರವರ್ತಿ ಸುದೀಪ್ ಅಭಿನಯದ ಬಹು ನೀರಿಕ್ಷಿತ ಚಿತ್ರ ಕೋಟಿಗೊಬ್ಬ-3 ಚಿತ್ರದ ಟೀಸರ್ ಅನ್ನು ಫೆಬ್ರವರಿ 21 ರಂದು ಬಿಡುಗಡೆ ಮಾಡಲು ಚಿತ್ರತಂಡ ಸಿದ್ಧತೆ ಮಾಡಿಕೊಳ್ಳುತ್ತಿದೆ. ಈ ಮೂಲಕ ಶಿವರಾತ್ರಿ ಹಬ್ಬಕ್ಕೆ ಕಿಚ್ಚನ ಅಭಿಮಾನಿಗಳಿಗೆ ಬಂಪರ್ ಗಿಫ್ಟ್ ಕೊಡಲು ತಯಾರಾಗಿದೆ. ನಿರ್ಮಾಪಕ ಸೂರಪ್ಪ ಬಾಬು ನಿರ್ಮಾಣ ಮಾಡುತ್ತಿರುವ ಕೋಟಿಗೊಬ್ಬ-3 ಚಿತ್ರವನ್ನು ಶಿವಕಾರ್ತಿಕ್ ನಿರ್ದೇಶನ ಮಾಡುತ್ತಿದ್ದಾರೆ. ಕೋಟಿಗೊಬ್ಬ-2 ಚಿತ್ರ 2016 ರಲ್ಲಿ ಬಿಡುಗಡೆಯಾಗಿ ಸೂಪರ್ ಹಿಟ್ ಆಗಿತ್ತು. ಈಗ ಕೋಟಿಗೊಬ್ಬ-3 ಚಿತ್ರ ಬಿಡುಗಡೆಗೆ ಸಿದ್ಧವಾಗಿದ್ದು, ಈ ಚಿತ್ರದ ಟೀಸರ್ ಅನ್ನು ಫೆಬ್ರವರಿ 21 ಶಿವರಾತ್ರಿ ಹಬ್ಬದ ದಿನ ಮಧ್ಯಾಹ್ನ 12 ಗಂಟೆ 1 ನಿಮಿಷಕ್ಕೆ ಬಿಡುಗಡೆ ಮಾಡುತ್ತೇವೆ.

Related