ಬೆಂಗಳೂರು: ಕರುನಾಡ ಚಕ್ರವರ್ತಿ ಹ್ಯಾಟ್ರಿಕ್ ಹೀರೋ ನಟ ಶಿವರಾಜ್ ಕುಮಾರ್ ಅವರಿಗೆ ಇಂದು (ಶನಿವಾರ ಜುಲೈ 12) ಹುಟ್ಟು ಹಬ್ಬದ ಸಂಭ್ರಮ. ಶಿವಣ್ಣ ಅವರು ಇಂದು 63ನೇ ವಸಂತಕ್ಕೆ ಕಾಲಿಟ್ಟಿದ್ದಾರೆ.
ಇನ್ನು ಹುಟ್ಟು ಹಬ್ಬದ ಸಂಭ್ರಮಾಚರಣೆಯನ್ನು ತಮ್ಮ ಪ್ರೀತಿಯ ಅಭಿಮಾನಿಗಳೊಂದಿಗೆ ಆಚರಿಸಿಕೊಂಡಿದ್ದಾರೆ.
ಹೌದು, ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರಿಗೆ ಇಂದು 63ನೆಯ ಹುಟ್ಟು ಹಬ್ಬದ ಸಂಭ್ರಮಾಚರಣೆಯ ಪ್ರಯುಕ್ತ ಅಭಿಮಾನಿಗಳು ರಾತ್ರಿ 12 ಗಂಟೆಗೆ ಮನೆ ಮುಂದೆ ಜಮಾಯಿಸಿ ನೆಚ್ಚಿನ ನಟನ ಹುಟ್ಟುಹಬ್ಬವನ್ನು ಬಹಳ ಸಂಭ್ರಮದಿಂದ ಆಚರಿಸಿದ್ದಾರೆ.
ಬೆಂಗಳೂರಿನ ಮಾನ್ಯತಾ ಟೆಕ್ ಪಾರ್ಕ್ನ ನಿವಾಸದಲ್ಲಿ ಪತ್ನಿ ಗೀತಾ ಜೊತೆ, ಕೇಕ್ ಕಟ್ ಮಾಡುವ ಮೂಲಕ ಶಿವಣ್ಣ ಹುಟ್ಟುಹಬ್ಬ ಸೆಲೆಬ್ರೇಟ್ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಸ್ಯಾಂಡಲ್ ವುಡ್ ಕ್ವೀನ್ ಗೆ ಒಲಿದು ಬಂದ ಅಂಬಾಸಿಡರ್ ಭಾಗ್ಯ..!
ಇನ್ನು, ನಟ ಶಿವಣ್ಣನನ್ನು ನೋಡಲು ನೂರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಆಗಮಿಸಿದ್ದರು. ಮನೆ ಬಳಿ ಬ್ಯಾನರ್ ಹಾಕಿ, ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ.
ಮುಖ್ಯವಾಗಿ ಶಿವಣ್ಣ ಮನೆ ಬಳಿ ಮುಂಜಾಗೃತಾ ಕ್ರಮವಾಗಿ ಪೊಲೀಸ್ ಭದ್ರತೆ ನಿಯೋಜನೆ ಮಾಡಲಾಗಿತ್ತು. ಈ ಮಧ್ಯೆ ಮನೆ ಬಳಿ ಆಗಮಿಸಿದ್ದ ಅಭಿಮಾನಿಗಳಿಗೆ ಶೇಕ್ ಹ್ಯಾಂಡ್ ಮಾಡಿ ಕಳುಹಿಸಿಕೊಟ್ಟಿದ್ದಾರೆ.
