ಬೆಂಗಳೂರು: ಐಪಿಎಲ್ 2025 ನೇ ಸಾಲಿನಲ್ಲಿ ಆರ್‌ಸಿಬಿ ತಂಡ ಗೆದ್ದಿರುವುದರಿಂದ ಕರ್ನಾಟಕ ರಾಜ್ಯದಲ್ಲಿ ಆರ್‌ಸಿಬಿ ವಿಜಯೋತ್ಸವ ಸಂದರ್ಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಲ್ತುಳಿತ ಘಟನೆಯಲ್ಲಿ ಆರ್‌ಸಿಬಿ ಅಭಿಮಾನಿಗಳು 11 ಜನ ಸಾವನ್ನಪ್ಪಿರುವ ಘಟನೆಗೆ ಸಂಬಂಧಿಸಿದಂತೆ ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲವೇ ಸೃಷ್ಟಿಯಾಗುತ್ತಿದ್ದು, ಇದನ್ನೇ ಬಂಡವಾಳವನ್ನಾಗಿ ಮಾಡಿಕೊಂಡಿರುವ ವಿರೋಧ ಪಕ್ಷದ ನಾಯಕರು ಆಡಳಿತ ಪಕ್ಷದ ವಿರುದ್ಧ ಆರೋಪಗಳ ಮೇಲೆ ಆರೋಪ ಮಾಡುತ್ತಿದ್ದಾರೆ.
ಈಗಾಗಲೇ ರಾಜ್ಯ ಸರ್ಕಾರದ ವಿರುದ್ಧ ವಿರೋಧ ಪಕ್ಷದ ನಾಯಕರು ಪ್ರತಿಭಟನೆ ಕೈಗೊಳ್ಳುವುದರ ಜೊತೆಗೆ ವಿಧ ವಿಧ ಆರೋಪಗಳನ್ನು ಮಾಡುತ್ತಿದ್ದಾರೆ.
ಇನ್ನು ಈ ಕುರಿತು ಜೆಡಿಎಸ್ ನ ಯುವ ಘಟಕದ ಅಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿಯವರು ರಾಜ್ಯ ಸರ್ಕಾರದ ವಿರುದ್ಧ ಕಿರಿಕರಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇವಲ ಅಧಿಕಾರದ ಸಿಂಹಾಸನವನ್ನು ಆರಿಸಿಕೊಂಡರೆ ಹೊರತಾಗಿ ಜನಸಾಮಾನ್ಯರನ್ನು ರಕ್ಷಿಸಲಲ್ಲ ಎಂದು ನಿಖಿಲ್ ಕುಮಾರಸ್ವಾಮಿ ಗುಡುಗಿದ್ದಾರೆ.
ಈ ಕುರಿತು x ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ಸಿದ್ದರಾಮಯ್ಯ ಅವರು ಅಧಿಕಾರದ ಸಿಂಹಾಸನವನ್ನು ಆರಿಸಿಕೊಂಡರೇ ಹೊರತು ಜನಸಾಮಾನ್ಯರನ್ನಲ್ಲ ಎಂದಿದ್ದಾರೆ.
ಆರ್‌ಸಿಬಿಯ ಗೆಲುವಿಗಾಗಿ 2 ಕಾರ್ಯಕ್ರಮಗಳು ಆಯೋಜನೆ ಮಾಡಲಾಗಿತ್ತು. ಒಂದು ವಿಐಪಿಗಳಿಗಾಗಿ ವಿಧಾನಸೌಧದಲ್ಲಿ, ಇನ್ನೊಂದು ಜನಸಾಮಾನ್ಯರಿಗಾಗಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರದ ಸಿಂಹಾಸನವನ್ನು ಆರಿಸಿಕೊಂಡರೇ ಹೊರತು ಜನಸಾಮಾನ್ಯರನ್ನಲ್ಲ.
11 ಅಭಿಮಾನಿಗಳು ಕಾಲ್ತುಳಿತದಲ್ಲಿ ಸಾವನ್ನಪ್ಪಿದಾಗ, ಸಚಿವರ ಕುಟುಂಬಗಳು ಸೆಲ್ಫಿ ತೆಗೆದುಕೊಳ್ಳುವುದರಲ್ಲಿ ನಿರತರಾಗಿದ್ದರು. ಆದರೂ ಕೂಡ ಮುಖ್ಯಮಂತ್ರಿಗಳ ಪ್ರತಿಕ್ರಿಯೆ? ಅದು ನಮ್ಮ ಕಾರ್ಯಕ್ರಮವಾಗಿರಲಿಲ್ಲ. ಕ್ರೀಡಾಂಗಣವು ವಿಧಾನಸೌಧದಿಂದ ಕೂಗಳತೆಯ ದೂರದಲ್ಲಿದೆ. ಅದು ಪಾಕಿಸ್ತಾನವಲ್ಲ. ಇದನ್ನೂ ಓದಿ:ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಥಗ್ ಲೈಫ್ ಸಿನಿಮಾ ತಂಡಕ್ಕೆ ನಿರಾಸೆ
ಇದು ನಿಮ್ಮ ರಾಜ್ಯ, ನಿಮ್ಮ ನಗರ, ನಿಮ್ಮ ಜನರು. ನೀವು ರಾಜ್ಯವನ್ನು ಮುನ್ನಡೆಸಲು ಆಯ್ಕೆಯಾದವರು, ಕಾರ್ಯಕ್ರಮದಲ್ಲಿ ಅತಿಥಿಯಂತೆ ವರ್ತಿಸುವುದನ್ನು ಮೊದಲು ನಿಲ್ಲಿಸಿ. ಫೋಟೋ-ಶೋಗಳಿಗಾಗಿ ನಿಮ್ಮನ್ನು ನೇಮಿಸಲಾಗಿಲ್ಲ. ಜನರ ಜೀವಗಳನ್ನು ರಕ್ಷಿಸಲು ನಿಮ್ಮನ್ನು ನೇಮಿಸಲಾಗಿದೆ. ಆದರೆ ನೀವು ಮಾತ್ರ ಜನರ ಜೀವಗಳನ್ನು ರಕ್ಷಿಸಲು ವಿಫಲರಾಗಿದ್ದಿರಿ ಎಂದು ಕಿಡಿಕಾರಿದ್ದಾರೆ.
