ಕಾಂಗ್ರೆಸ್ ಗೆಲ್ಲಿಸಿ ಬಿಜೆಪಿಗೆ ಪಾಠ ಕಲಿಸಲು ಸಿದ್ದರಾಮಯ್ಯ ಕರೆ

ಕಾಂಗ್ರೆಸ್ ಗೆಲ್ಲಿಸಿ ಬಿಜೆಪಿಗೆ ಪಾಠ ಕಲಿಸಲು ಸಿದ್ದರಾಮಯ್ಯ ಕರೆ

ಸಿಂದಗಿ : ಕಳೆದ ಕಾಂಗ್ರೆಸ್ ಸರ್ಕಾರದಲ್ಲಿ ಜಾರಿ ಮಾಡಿದ ಎಲ್ಲ ಯೋಜನೆಗಳನ್ನು ಈಗ ಆಡಳಿತ ನಡೆಸುತ್ತಿರುವ ಭ್ರಷ್ಟ ಬಿಜೆಪಿ ಸರ್ಕಾರ ರದ್ದುಗೊಳಿಸಿ ಜನರನ್ನು ಸಂಕಷ್ಟಕ್ಕೀಡು ಮಾಡುತ್ತಿದೆ. ಅಭಿವೃದ್ಧಿ ಮಾಡದ ಬಿಜೆಪಿ ಸರ್ಕಾರಕ್ಕೆ ಪಾಠ ಕಲಿಸಬೇಕಾದರೆ ಅಶೋಕ ಮನಗೂಳಿಯವರನ್ನು ಗೆಲ್ಲಿಸಿ ಈ ಸರ್ಕಾರಕ್ಕೆ ತಕ್ಕ ಉತ್ತರ ನೀಡಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

ಪಟ್ಟಣದ ಎಚ್.ಜಿ.ಕಾಲೇಜು ಆವರಣದಲ್ಲಿ ಕಾಂಗ್ರೆಸ್ ಪಕ್ಷ ಆಯೋಜಿಲಾದ ಅಭ್ಯರ್ಥಿಪರ ಮತಯಾಚನೆ ಸಮಾರಂಭದಲ್ಲಿ ಅವರು ಮಾತನಾಡಿ, ಕಾಂಗ್ರೆಸ್ ಪಕ್ಷದ ಆಡಳಿತದಲ್ಲಿ ಶಾದಿಭಾಗ್ಯ, ಕ್ಷೀರಭಾಗ್ಯ, ಶೂಭಾಗ್ಯ, ಸೈಕಲ್ ಭಾಗ್ಯ, ಪ್ರತಿ ಕುಟುಂಬದ ಸದಸ್ಯನಿಗೆ 7 ಕೆಜಿ ಅಕ್ಕಿ, ಗೋಧಿ ಸೇರಿದಂತೆ ಹತ್ತು ಹಲವಾರು ಭಾಗ್ಯಗಳನ್ನು ಪುಕ್ಕಟೆಯಾಗಿ ನೀಡಿದ್ದೇವೆ. ಆದರೆ ಈಗೀನ ಬಿಜೆಪಿ ಸರ್ಕಾರ ಎಲ್ಲ ಭಾಗ್ಯಗಳನ್ನು ಬಂದ್ ಮಾಡುವ ಮೂಲಕ ಜನಸಾಮಾನ್ಯರಿಗೆ ಹೊರೆಯಾಗುವ ಡೀಸೆಲ್, ಪೆಟ್ರೋಲ್, ಗ್ಯಾಸ್ ಸಿಲಿಂಡರ್ ಹಾಗೂ ದಿನಬಳಕೆ ವಸ್ತುಗಳ ಬೆಲೆಗಳನ್ನು ಗಗನಕ್ಕೇರಿಸಿರುವುದಲ್ಲದೆ ತೆರಿಗೆ ರೂಪದಲ್ಲಿ ಜನರನ್ನು ಲೂಟಿ ಮಾಡುತ್ತಿದೆ ಇಂತಹ ಸರಕಾರ ಬೇಕಾ?. ಇಂತಹ ಭ್ರಷ್ಟ ಸರ್ಕಾರವನ್ನು ಕಿತ್ತೋಗೆದು ಮತ್ತೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲು ಇದು ಮುನ್ನುಡಿಯಾಗಬೇಕು ಎಂದರು.

ಈ ವೇಳೆ ಕೆಪಿಸಿಸಿಅಧ್ಯಕ್ಷ ಡಿ.ಕೆ.ಶಿವಕುಮಾರ ಮಾತನಾಡಿ, ರಾಜ್ಯದಲ್ಲಿ ವಿಜಯಪುರ ಮತ್ತು ಬಾಗಲಕೋಟ ಜಿಲ್ಲೆಯಲ್ಲಿ ಸುಮಾರು 2 ಲಕ್ಷ ರೈತರ ಜಮೀನುಗಳೀಗೆ ನೀರಾವರಿ ಕಲ್ಪಿಸಿಕೊಟ್ಟಿದ್ದು ಕಾಂಗ್ರೆಸ್ ಸರಕಾರ. ಆದರೆ ಬಿಜೆಪಿ ಪಕ್ಷದ ನಾಯಕರು ಎಲ್ಲವೂ ನಾವೇ ಮಾಡಿದ್ದು ಎಂದು ಜನರಿಗೆ ಸುಳ್ಳು ಹೇಳುತ್ತಿದ್ದಾರೆ ಎಂದರು.

ಬಳಿಕ ಮಾಜಿ ಸಚಿವ ಎಂ.ಬಿ.ಪಾಟೀಲ ಮಾತನಾಡಿ, ಈ ರಾಜ್ಯದಲ್ಲಿ ಸಂಪೂರ್ಣ ನೀರಾವರಿ ಕ್ಷೇತ್ರವನ್ನಾಗಿ ಮಾಡಿದ್ದು ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ. ನಾವು ಮಾಡಿದ್ದೇವೆ ಎಂದು ಸುಳ್ಳು ಹೇಳಿಕೊಂಡು ಅಧಿಕಾರ ನಡೆಸುವ ಬಿಜೆಪಿ ಸರ್ಕಾರಕ್ಕೆ ಮುಂಬರುವ ಚುನಾವಣೆಯಲ್ಲಿ ಜನತೆ ತಕ್ಕ ಉತ್ತರ ನೀಡುತ್ತಾರೆ. ಈ ಭಾಗದಲ್ಲಿ ಕಾಂಗ್ರೆಸ್ ಪಕ್ಷದಿಂದ ಅನೇಕ ಜನಪರ ನೂರೆಂಟು ಕೆಲಸಗಳು ಕಾರ್ಯರೂಪಕ್ಕೆ ಬಂದಿವೆ ಆ ಕಾರಣಕ್ಕೆ ಕಾಂಗ್ರೆಸ್ ಅಭ್ಯರ್ಥಿ ಅಶೋಕ ಮನಗೂಳಿ ಕನಿಷ್ಠ 35ರಿಂದ 40 ಸಾವಿರ ಮತಗಳ ಅಂತರದಿಂದ ಗೆದ್ದೆ ಗೆಲ್ಲುತ್ತಾರೆ ಎನ್ನುವ ವಿಶ್ವಾಸ ನನಗಿದೆ ಎಂದರು.

ಇಂಡಿ ಶಾಸಕ ಯಶವಂತ್ರಾಯಗೌಡ ಪಾಟೀಲ, ಬಾಗೇವಾಡಿ ಶಾಸಕ ಶಿವಾನಂದ ಪಾಟೀಲ, ಜಿಲ್ಲಾಧ್ಯಕ್ಷ ರಾಜು ಆಲಗೂರ, ಮಾಜಿ ಶಾಸಕ ಶರಣಪ್ಪ ಸುಣಗಾರ ಅಭ್ಯರ್ಥೀ ಅಶೋಕ ಮನಗೂಳಿ ಮಾತನಾಡಿದರು.

ಈ ಸಂದರ್ಭದಲ್ಲಿ ಅಯೂಬ ದೇವರಮನಿ, ಮಲ್ಲಣ್ಣಾ ಸಾಲಿ, ಕೆಪಿಸಿಸಿ ಸದಸ್ಯ ಮುಸ್ತಾಕ ಮುಲ್ಲಾ, ಶಿವನಗೌಡ ಬಿರಾದಾರ, ಎಪಿಎಂಸಿ ಅಧ್ಯಕ್ಷ ಸಿದ್ದಣ್ಣ ಹಿರೇಕುರಬರ, ಯೋಗಪ್ಪಗೌಡ ಪಾಟೀಲ, ಎಂ.ಎ.ಖತೀಬ, ಗುರಣ್ಣಗೌಡ ಬಿರಾದಾರ, ನಿಂಗನಗೌಡ ಪಾಟೀಲ, ಭೀಮರಾಯ ಅಮರಗೋಳ, ಭೀಮಾಶಂಕರ ಬಡಿಗೇರ, ಇರ್ಫಾನ ಮುಲ್ಲಾ, ಇರ್ಫಾನ ಅಳಂದ, ಶಫೀ ಜಮಾದಾರ, ನಿಂಗಣ್ಣ ಚಟ್ಟಿ, ಬ್ಲಾಕ್ ಸಮಿತಿ ಅಧ್ಯಕ್ಷ ವಿಠ್ಠಲ ಕೊಳ್ಳುರ, ರಾಜಶೇಖರ ಕೂಚಬಾಳ ಭಾಗವಹಿಸಿದ್ದರು.

 

Related