ಮುಖ್ಯಮಂತ್ರಿ ಬದಲಾವಣೆಗೆ ಸಿದ್ದರಾಮಯ್ಯ ಹಗಲುಗನಸು

ಮುಖ್ಯಮಂತ್ರಿ ಬದಲಾವಣೆಗೆ ಸಿದ್ದರಾಮಯ್ಯ ಹಗಲುಗನಸು

ಮಂಗಳೂರು : ರಾಜ್ಯದಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪರನ್ನು ಬದಲಾಯಿಸಲಾಗುತ್ತದೆ ಎನ್ನುವುದು ಸಿದ್ದರಾಮಯ್ಯನವರ ಹಗಲುಗನಸು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಟೀಕಿಸಿದ್ದಾರೆ.

ಅವರು ನಗರದ ಬಿಜೆಪಿ ಕಚೇರಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದರು. ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ನಮ್ಮ ಪಕ್ಷದ ಕಾರ್ಯಕರ್ತರ ಮತ್ತು ನಾಯಕರ ಸಂಘಟಿತ ಪ್ರಯತ್ನದಿಂದ ಹಾಗೂ ಯಡಿಯೂರಪ್ಪ ನೇತೃತ್ವದ ಬಿಜೆಪಿ ರ‍್ಕಾರವು ಅಭಿವೃದ್ಧಿ ಕಾರ್ಯಕ್ರಮಗಳಿಂದ ಮತದಾರರು ಬಿಜೆಪಿಯನ್ನು ಬೆಂಬಲಿಸಿದ್ದಾರೆ. ಅವರೆಲ್ಲರಿಗೂ ಕೃತಜ್ಞತೆ ಸಲ್ಲಿಸುವುದಾಗಿ ಎಂದು ನಳಿನ್ ನುಡಿದರು.

ಮತದಾರರು ಕಾಂಗ್ರೆಸ್ ನ ಬಂಡೆ ಒಡೆದಿದ್ದಾರೆ, ಹುಲಿಯಾ ಗೂಡು ಸೇರುವಂತೆ ಮಾಡಿದ್ದಾರೆ ಎಂದು ರಾಜ್ಯ ಕಾಂಗ್ರೆಸ್‌ನ ಹಿರಿಯ ಮುಖಂಡರಾದ ಡಿ.ಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರನ್ನು ನಳಿನ್ ಕುಮಾರ್ ಪರೋಕ್ಷವಾಗಿ ಟೀಕಿಸಿದರು.

ರಾಜ್ಯದ ವಿಧಾನ ಪರಿಷತ್ ನ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳ 4 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲೂ ಬಿಜೆಪಿ ಜಯಬೇರಿ ಬಾರಿಸಿದೆ. ಬಿಜೆಪಿ ಸಂಘಟಿತ ಪ್ರಯತ್ನದಿಂದ ಉಪ ಚುನಾವಣೆ, ಗ್ರಾಮ ಪಂಚಾಯತ್ ಚುನಾವಣೆಗಳಲ್ಲೂ ಜಯ ಗಳಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಎಂ., ವಕ್ತಾರ ರವಿಶಂಕರ್ ಮಿಜಾರ್, ಜಗದೀಶ್ ಶೇಣವ ಮೊದಲಾದವರು ಉಪಸ್ಥಿತರಿದ್ದರು.

Related