ನವದೆಹಲಿ: ಸದ್ಯಕ್ಕೆ ಸಂಚಿವ ಸಂಪುಟ ಬದಲಾವಣೆ ಕುರಿತು ಯಾವುದೇ ಚರ್ಚೆಯಿಲ್ಲ. ನಾವು ಬಂದಿರುವುದು ಅಭಿವೃದ್ದಿ ವಿಚಾರಗಳನ್ನು ಚರ್ಚೆ ನಡೆಸಲು. ಬೆಂಗಳೂರಿನಲ್ಲಿ ಒಂದಷ್ಟು ರಸ್ತೆಗಳನ್ನು ಅಗಲೀಕರಣ ಮಾಡಬೇಕಿದೆ. ಇದಕ್ಕೆ ರಕ್ಷಣಾ ಇಲಾಖೆ ಭೂಮಿಗಳ ಅವಶ್ಯಕತೆಯಿದೆ. ಈ ಕಾರಣಕ್ಕೆ ಹಾಗೂ ದಸರಾ ವೇಳೆ ಚುಟುಕು ಏರ್ ಶೋ ನಡೆಸಲು ರಕ್ಷಣಾ ಸಚಿವರನ್ನು ಭೇಟಿ ಮಾಡುವುದಕ್ಕಾಗಿ ಬಂದಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.
ದೆಹಲಿಯ ಕರ್ನಾಟಕ ಭವನದಲ್ಲಿ ಇಂದು (ಬುಧವಾರ ಜುಲೈ 09) ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಧಾನಸಭಾ ಅಧಿವೇಶನದ ಮುಂಚಿತವಾಗಿ ಮುಗಿಯುತ್ತದೆ ಎಂದು ಹೇಳಿದರು. ಮಾಧ್ಯಮದವರಿಗೂ ಒಂದು ಸ್ಥಾನ ನೀಡಲಾಗುವುದು ಎಂದು ಹೇಳಿದರು.
ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಿಲ್ಲ. ಹಿರಿಯ ನಾಯಕರ ಭೇಟಿಗೆ ಸಮಯ ಕೇಳಿದ್ದೇನೆ. ಸಮಯ ನೀಡದಿದ್ದರೆ ಯಾರನ್ನೂ ಭೇಟಿಯಾಗಲು ಆಗುವುದಿಲ್ಲ. ರಾಹುಲ್ ಗಾಂಧಿ ಅವರು ಪಾಟ್ನಾಗೆ ತೆರಳಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಸುಳ್ಳು ಸುದ್ದಿಗಳಿಗೆ ಬ್ರೇಕ್ ಹಾಕಲು ಸರ್ಕಾರ ಸಿದ್ಧ..!
ವಿರೋಧ ಪಕ್ಷಗಳ ದನಿಯನ್ನು ಅಡಗಿಸುವುದೇ ಈ ಸರ್ಕಾರದ ಕೆಲಸ. ರಾಹುಲ್ ಗಾಂಧಿ ಅವರು ಮತದಾರರ ಹಕ್ಕುಗಳನ್ನು ರಕ್ಷಿಸಲು ಹೋಗಿದ್ದಾರೆ ಎಂದು ಹೇಳಿದರು. ಇದು ಆಯಾ ರಾಜ್ಯಕ್ಕೆ ಸಂಬಂಧಪಟ್ಟ ವಿಚಾರ. ಅದರ ಬಗ್ಗೆ ನಾನು ಮಾತನಾಡುವುದಿಲ್ಲ. ನಾವು ಕನ್ನಡ ಮತ್ತು ಇಂಗ್ಲಿಷ್ ಗೆ ಪ್ರಾಮುಖ್ಯತೆ ನೀಡುತ್ತೇವೆ ಎಂದು ಹೇಳಿದರು.
ಎರಡು- ಮೂರು ದಿನದಲ್ಲಿ ಗ್ಲೋಬಲ್ ಟೆಂಡರ್ ಕರೆಯಲಾಗುವುದು. ಟೋಲ್ ಇಲ್ಲದೇ ರಸ್ತೆ ಮಾಡಲು ಸಾಧ್ಯವಿಲ್ಲ. ಏರ್ ಪೋರ್ಟ್, ಮೈಸೂರು ರಸ್ತೆ, ನೈಸ್ ರಸ್ತೆಗಳಲ್ಲಿ ಟೋಲ್ ಇದೆಯಲ್ಲಾ ಎಂದರು.
