ಸಚಿವಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ

ಸಚಿವಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ

ಬೆಂಗಳೂರು : ರಾಜ್ಯ ಸಚಿವ ಸಂಪುಟ ಚರ್ಚೆ ಬೆನ್ನಲ್ಲೇ ಬಿ.ಎಸ್. ಯಡಿಯೂರಪ್ಪ ಅವರು ದಿಢೀರ್ ದೆಹಲಿಗೆ ತೆರಳುತ್ತಿದ್ದು, ಇಂದು ಸಂಜೆ ದೆಹಲಿ ತಲುಪಲಿರುವ ಸಿಎಂ ಬಿ.ಎಸ್. ಯಡಿಯೂರಪ್ಪ ಹೈಕಮಾಂಡ್ ಭೇಟಿಯಾಗಿ ಸಚಿವ ಸಂಪುಟ ವಿಸ್ತರಣೆ ಸಂಬಂಧ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ. ಈ ಮೂಲಕ ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಸಿಹಿಸುದ್ದಿ ನೀಡಿದ್ದಾರೆ.

ಇನ್ನು ಸಂಪುಟ ವಿಸ್ತರಣೆ ಕುರಿತು ಒತ್ತಡಗಳು ಹೆಚ್ಚಾಗುತ್ತಿರುವುದರಿಂದ ಮಳೆಗಾಲ ಅಧಿವೇಶನಕ್ಕೂ ಮೊದಲೇ ಸಂಪುಟ ವಿಸ್ತರಣೆಗೆ ಅವಕಾಶವನ್ನು ಸಿಎಂ ಕೇಳಲಿದ್ದಾರೆ. ಜೊತೆಗೆ ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ರಾಜ್ಯದ ಜಿಎಸ್ ಟಿ ಬಾಕಿ ಕುರಿತು ಚರ್ಚೆ ನಡೆಸಲಿದ್ದಾರೆ ಎಂದು ಹೇಳಲಾಗುತ್ತಿದೆ.

Related