ರಾಜ್ಯದಲ್ಲಿಯೇ ಪ್ರಥಮ ಸ್ಥಾನ ಸ್ಮಾರ್ಟ್ ಸಿಟಿ

ರಾಜ್ಯದಲ್ಲಿಯೇ ಪ್ರಥಮ ಸ್ಥಾನ ಸ್ಮಾರ್ಟ್ ಸಿಟಿ

ತುಮಕೂರು : ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಸ್ಮಾರ್ಟ್ ಸಿಟಿ ಯೋಜನೆಯಡಿ ಆಯ್ಕೆಯಾದ ದೇಶದ 100 ಸ್ಮಾರ್ಟ್ ಸಿಟಿಗಳಲ್ಲಿ ತುಮಕೂರು ಸಹ ಒಂದಾಗಿದೆ. ನಗರದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯನ್ನು ಅನುಷ್ಟಾನ ಮಾಡಲು 2ನೇ ಹಂತದಲ್ಲಿ 2016ನೇ ಇಸವಿಯಲ್ಲಿ ಭಾರತ ಸರ್ಕಾರವು ಆಯ್ಕೆ ಮಾಡಿದ್ದು, ಯೋಜನೆಗಳ ಅನುಷ್ಠಾನವು ಪ್ರಗತಿಯಲ್ಲಿದೆ.

ಕಳೆದ ವರ್ಷ ತುಮಕೂರು ಸ್ಮಾರ್ಟ್ ಸಿಟಿ ದೇಶದಲ್ಲಿ 23ನೇ ಸ್ಥಾನದಲ್ಲಿದ್ದು, ಪ್ರಸ್ತುತ 09ನೇ ಸ್ಥಾನಕ್ಕೆ ಏರಿಕೆಯಾಗಿದೆ ಹಾಗೂ ರಾಜ್ಯದ 07 ಸ್ಮಾರ್ಟ್ಸಿಟಿಗಳಲ್ಲಿ ಪ್ರಥಮ ಸ್ಥಾನಕ್ಕೆ ಏರಿಕೆಯಾಗಿದೆ. ತುಮಕೂರು ಸ್ಮಾರ್ಟ್ಸಿಟಿಯು ಅನುಷ್ಟಾನಗೊಳಿಸುತ್ತಿರುವ ಯೋಜನೆಗಳ ಪ್ರಗತಿ ಮತ್ತು ಸರ್ಕಾರದಿಂದ ಬಿಡುಗಡೆಯಾದ ಅನುದಾನದ ಸದ್ಬಳಕೆ ಹಾಗೂ ಇತರೆ ಮಾಹಿತಿಯನ್ನು ಕೇಂದ್ರ ಸರ್ಕಾರಕ್ಕೆ ಕಾಲಕಾಲಕ್ಕೆ ಸಲ್ಲಿಸಲಾಗುತ್ತದೆ.

ಈ ಎಲ್ಲಾ ಮಾಹಿತಿಯ ಆಧಾರದ ಮೇಲೆ ಕೇಂದ್ರ ಸರ್ಕಾರವು ಜೂನ್ 12 ರಂದು ಬಿಡುಗಡೆ ಮಾಡಿರುವ ರ‍್ಯಾಂಕಿAಗ್ ಪಟ್ಟಿಯಲ್ಲಿ ತುಮಕೂರು ಸ್ಮಾರ್ಟ್ಸಿಟಿ ಪ್ರಥಮ ಸ್ಥಾನ ಗಳಿಸಿದೆ. ಮುಂಬರುವ ದಿನಗಳಲ್ಲಿಯೂ ಸಹ ಸ್ಮಾರ್ಟ್ ಸಿಟಿಯ ಎಲ್ಲಾ ಕಾಮಗಾರಿಗಳ ಪ್ರಗತಿಯನ್ನು ಹೆಚ್ಚಿಸಿ ನಗರವನ್ನು ಸ್ಮಾರ್ಟ್ ಸಿಟಿ ಮಾಡಲು ಶ್ರಮವಹಿಸಲಾಗುವುದು.

ಹಾಗೂ ಯೋಜನೆಯ ಅನುಷ್ಠಾನಲ್ಲಿ ಸಲಹೆ ಮತ್ತು ಸೂಚನೆಗಳನ್ನು ನೀಡುತ್ತಿರುವ ಪ್ರತಿನಿಧಿಗಳಿಗೆ, ಸ್ಮಾರ್ಟ್ಸಿಟಿ ಅಧ್ಯಕ್ಷರಿಗೆ ಮತ್ತು ಸದಸ್ಯ ಮಂಡಳಿ ಸದಸ್ಯರುಗಳಿಗೆ, ವಿವಿಧ ಇಲಾಖೆಯ ಅಧಿಕಾರಿಗಳಿಗೆ ಹಾಗೂ ಸಮಸ್ತ ನಾಗರಿಕರುಗಳಿಗೆ ಧನ್ಯವಾದಗಳನ್ನು ಸಲ್ಲಿಸಲಾಗುವುದು ಎಂದು ತುಮಕೂರು ಸ್ಮಾರ್ಟ್ಸಿಟಿ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕರು ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿಗಳಾದ ಟಿ.ಭೂಬಾಲನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related