ಸಂಸತ್‌ ಅಧಿವೇಷನ ಕುರಿತು ಪ್ರಧಾನಿಗೆ ಸೋನಿಯಾ ಗಾಂಧಿ ಪತ್ರ

ಸಂಸತ್‌ ಅಧಿವೇಷನ ಕುರಿತು ಪ್ರಧಾನಿಗೆ ಸೋನಿಯಾ ಗಾಂಧಿ ಪತ್ರ

ನವದೆಹಲಿ. ಸೆ,6: ಸೆಪ್ಟೆಂಬರ್ 18-22 ರಂದು ನಡೆಯಲಿರುವ ಸಂಸತ್ ಅಧಿವೇಶನದ ಕಾರ್ಯಸೂಚಿಯನ್ನು ಕೋರಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಪ್ರಧಾನಿಗೆ ಪತ್ರ ಬರೆದಿದ್ದಾರೆ. ವಿರೋಧ ಪಕ್ಷಗಳಿಗೆ ಮಾಹಿತಿ ನೀಡದೆಯೇ ವಿಶೇಷ ಅಧಿವೇಶನ ಕರೆಯಲಾಗಿದೆ ಎಂದು ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಮೋದಿ ಅವರಿಗೆ ಬರೆದ ಪತ್ರದಲ್ಲಿ ಹೇಳಿದ್ದಾರೆ. ಅಲ್ಲದೆ ಅಧಿವೇಶನದಲ್ಲಿ ವಿರೋಧ ಪಕ್ಷಗಳು ಚರ್ಚೆ ಮಾಡಲು ಬಯಸಿರುವ ವಿಷಯಗಳ ಬಗ್ಗೆಯೂ ಉಲ್ಲೇಖ ಮಾಡಿದ್ದಾರೆ.  ಅಜೆಂಡಾ ಏನು ಎನ್ನುವುದರ ಬಗ್ಗೆ ಯಾರಿಗೂ ಮಾಹಿತಿ ಇಲ್ಲ.

ಕಾರ್ಯಕ್ಕೆ ತೆಗೆದುಕೊಳ್ಳಬೇಕಾದ ಒಂಬತ್ತು ವಿಷಯಗಳನ್ನು ಪಟ್ಟಿ ಮಾಡಿದ ಸೋನಿಯಾ ಗಾಂಧಿ, “ಈ ವಿಷಯಗಳ ಬಗ್ಗೆ ಸೂಕ್ತ ನಿಯಮಗಳ ಅಡಿಯಲ್ಲಿ ಸಮಯವನ್ನು ನಿಗದಿಪಡಿಸಲಾಗುವುದು ಎಂದು ನಾನು ಪ್ರಾಮಾಣಿಕವಾಗಿ ಭಾವಿಸುತ್ತೇನೆ” ಎಂದು ಹೇಳಿದ್ದಾರೆ.

ಸಾರ್ವಜನಿಕ ಕಾಳಜಿ ಹಾಗೂ ಮಹತ್ವದ ವಿಷಯಗಳನ್ನು ಚರ್ಚೆ ಮಾಡುವ ಅವಕಾಶ ಸಿಗುವುದರಿಂದ  ಅಧಿವೇಶನದಲ್ಲಿ ಭಾಗವಹಿಸಲು ತೀರ್ಮಾನಿಸಿದ್ದೇವೆ.  ವಿಷಯಗಳನ್ನು ಪ್ರಸ್ತಾಪಿಸಲು ಸಂಬಂಧಪಟ್ಟ ನಿಮಯಗಳಡಿ ಸಮಯ ಸಿಗಬಹುದು ಎನ್ನುವ ಆಶಾಭಾವನೆ ನನ್ನದು’ ಎಂದು ಉಲ್ಲೇಖ ಮಾಡಿದ್ದಾರೆ.   ಬೆಲೆ ಏರಿಕೆ, ಹೆಚ್ಚುತ್ತಿರುವ ನಿರುದ್ಯೋಗ, ಮಣಿಪುರ ಗಲಭೆ, ಚೀನಾ ಅತಿಕ್ರಮಣ ಮುಂತಾದ ವಿಷಯಗಳ ಬಗ್ಗೆ ಚರ್ಚೆ ಅವಕಾಶ ಸಿಗುವ ನಿರೀಕ್ಷೆ ಇದೆ ಎಂದು ಸೋನಿಯಾ ಗಾಂಧಿ ಪತ್ರದಲ್ಲಿ ಬರೆದಿದ್ದಾರೆ.

 

 

 

 

Related