ಸೋನು ಶ್ರೀನಿವಾಸ್ ಗೌಡ ಬಂಧನ

ಸೋನು ಶ್ರೀನಿವಾಸ್ ಗೌಡ ಬಂಧನ

ಬೆಂಗಳೂರು: ಕನ್ನಡ ಬಿಗ್ ಬಾಸ್ ಖ್ಯಾತಿಯ ಸೋನು ಶ್ರೀನಿವಾಸ್ ಗೌಡ ಅವರು ಅರೆಸ್ಟ್ ಆಗಿದ್ದಾರೆ. ಕಾನೂನುಬಾಹಿರವಾಗಿ ಏಳು ವರ್ಷದ ಹೆಣ್ಣು ಮಗುವನ್ನು ದತ್ತು ಪಡೆದ ಕಾರಣ ಸೋನು ಗೌಡ ಅವರನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

ರಾಯಚೂರು ಮೂಲದ ಗಾರೆ ಕೆಲಸ ಮಾಡುವ ದಂಪತಿಗಳ ಏಳು ವರ್ಷದ ಮಗುವನ್ನು ಕಾನೂನುಬಾಹಿರವಾಗಿ ದತ್ತು ಪಡೆದ ಕಾರಣ ಕನ್ನಡ ಬಿಗ್ ಬಾಸ್ ಖ್ಯಾತಿಯ ಸೋನು ಶ್ರೀನಿವಾಸ್ ಗೌಡ ಅವರನ್ನು ಈಗ ಪೊಲೀಸ್ ಬಂಧಿಸಿದ್ದಾರೆ

ಈ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಗೀತಾ ದೂರು ನೀಡಿದ್ದರು. ಜೆ.ಜೆ.ಆ್ಯಕ್ಟ್ ಅಡಿ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ ದಾಖಲಿಸಿಕೊಂಡು ಬಂಧಿಸಿದ್ದಾರೆ.

ಇನ್ನು ಸೋನು ಗೌಡ ಮಗುವನ್ನು ದತ್ತು ಪಡೆದ ವಿಡಿಯೋ ಒಂದನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು.

3 ತಿಂಗಳಿಂದ ಪಾಸಿಟಿವ್ ಆಗಿ ಎಲ್ಲರೂ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಬಹುಶಃ ಇವಳನ್ನು ದತ್ತು ತೆಗೆದುಕೊಂಡಿದ್ದಕ್ಕೋ ಏನೋ’ ಎಂದು ಸೋನು ಶ್ರೀನಿವಾಸ್ ಗೌಡ ಯೂಟ್ಯೂಬ್ ವಿಡಿಯೋದಲ್ಲಿ ಹೇಳಿದ್ದರು.

ನಾನು ಅಪಾರ್ಟ್​ಮೆಂಟ್ ಕೆಳಗೆ ನಾಯಿಗೆ ಬಿಸ್ಕಿಟ್ ಹಾಕುವಾಗ ಇವಳು ಸಿಕ್ಕಿದ್ದಳು. ಅವಳಿಗೆ ಚಾಕೋಲೇಟ್ ಕೊಡಿಸಿದೆ. ನಂತರ ಶಾಪಿಂಗ್ ಹೋದೆವು. ಮನೆಗೆ ಕರೆದುಕೊಂಡು ಹೋಗಿ ಎಂದು ಕೇಳಿದಳು. ನಾನು ದತ್ತು ತೆಗೆದುಕೊಳ್ಳುವುದಕ್ಕೂ ಮೊದಲೇ ಅವಳಿಗೆ ಚೈನ್ ಕೊಡಿಸಿದ್ದೆ’ ಎಂದು ಸೋನು ವಿಡಿಯೋದಲ್ಲಿ ಹೇಳಿಕೊಂಡಿದ್ದರು.

ನಾನು ಅವಳ ಅಮ್ಮನ ಬಳಿ ದತ್ತು ಕೊಡುವಂತೆ ಕೇಳಿದೆ. ಇದನ್ನು ಕೇಳಿ ಅವಳ ತಾಯಿ ರಾಯಚೂರಿಗೆ ಹೋದರು. ಮಗುವಿಗೆ ನಾನಿಲ್ಲದೆ ಜ್ವರ ಬಂದಿತ್ತು. ಫೋನ್ ಮೂಲಕ ಸೇವಂತಿ ಬಳಿ ಮಾತನಾಡಿದೆ. ನಂತರ ಅವಳನ್ನು ಕರೆದುಕೊಂಡು ಬಂದೆ. ಕಾನೂನಾತ್ಮಕವಾಗಿ ದತ್ತು ತೆಗೆದುಕೊಳ್ಳಲು 3 ತಿಂಗಳು ಬೇಕು. ಅವಳ ಅಪ್ಪ ಅಮ್ಮನಿಗೆ ಒಪ್ಪಿಗೆ ಇದೆ. ನನಗೂ ಒಪ್ಪಿಗೆ ಇದೆ. ಕಾನೂನು ಕ್ರಮ ನಡೆಯುತ್ತಿದೆ’ ಎಂದು ಸೋನು ಹೇಳಿದ್ದರು. ಈ ಬೆನ್ನಲ್ಲೆ ನಟಿಯನ್ನು ಪೊಲೀಸರು ಬಂಧಿಸಿದ್ದಾರೆ.

Related