ಶೀಘ್ರವೇ ರಾಜ್ಯದ 1,500 ಮಾದರಿ ಸರ್ಕಾರಿ ಶಾಲೆ ಅಭಿವೃದ್ಧಿ

ಶೀಘ್ರವೇ ರಾಜ್ಯದ 1,500 ಮಾದರಿ ಸರ್ಕಾರಿ ಶಾಲೆ ಅಭಿವೃದ್ಧಿ

ಶಿರಸಿ ಜು14: ರಾಜ್ಯದ 1,500 ಶಾಲೆಗಳನ್ನು ಮಾದರಿ ಶಾಲೆಗಳನ್ನಾಗಿ ಮಾಡುವ ಕಾರ್ಯ ಆರಂಭವಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.

 

ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ರಾಜ್ಯದ 1,500 ಶಾಲೆಗಳನ್ನು ಮಾದರಿ ಶಾಲೆಗಳನ್ನಾಗಿಸುವ ಕೆಲಸವನ್ನು ಶೀಘ್ರವೇ ಮಾಡಲಾಗುವುದು. ಮಾದರಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಸ್ಪೋಕನ್ ಇಂಗ್ಲಿಷ್ ಕಲಿಸಲಾಗುವುದು. ಪ್ರತಿ ತರಗತಿಗೆ ಒಬ್ಬ ಶಿಕ್ಷಕರನ್ನು ಒದಗಿಸಲಾಗುವುದು ಎಂದು ತಿಳಿಸಿದ್ದಾರೆ.

 

ಪಠ್ಯಪರಿಷ್ಕರಣೆ ಕುರಿತು ಪ್ರತಿಕ್ರಿಯೆ ನೀಡಿದ ಸಚಿವರು, ಪಠ್ಯಪರಿಷ್ಕರಣೆ ಹಿಂದೆಯೂ ಆಗಿತ್ತು. ಆದರೆ ನಾವು ಚರ್ಚೆ ನಡೆಸುತ್ತಿದ್ದೇವು. ಈಗಿನ ವಿರೋಧ ಪಕ್ಷಗಳಂತೆ ಬೀದಿಯಲ್ಲಿ ಕೂಗುತ್ತಿರಲಿಲ್ಲ. ಹಿಂದಿನ ಸರ್ಕಾರಗಳ ಅವಧಿಯಲ್ಲಿ ಬರಗೂರು ರಾಮಚಂದ್ರಪ್ಪ ನೇತೃತ್ವದಲ್ಲಿ ಪಠ್ಯಪುಸ್ತಕ ಬದಲಾವಣೆ ಮಾಡಲಾಗಿತ್ತು. ಆದರೆ ಈಗ ಪಠ್ಯಪುಸ್ತಕ ಪರಿಷ್ಕರಣೆ ರಾಜಕೀಯಗೊಳಿಸುತ್ತಿರುವುದು ದುರಾದೃಷ್ಟ ಎಂದು ಹೇಳಿದ್ದಾರೆ.

Related