ಬೆಂಗಳೂರು: ಬೆಂಗಳೂರಿನಲ್ಲಿರುವ ನಮ್ಮ ಮೆಟ್ರೋದಲ್ಲಿ ಪ್ರಯಾಣ ಮಾಡಬೇಕಾದರೆ ಕೆಲವು ನಿಯಮಗಳನ್ನು ಪಾಲಿಸಬೇಕಾಗುತ್ತದೆ. ನಿಯಮಗಳನ್ನು ಪಾಲಿಸದವರ ವಿರುದ್ಧ ಬಿಎಮ್ಆರ್ಸಿಎಲ್ ಕಟ್ಟುನಿಟ್ಟಾಗಿ ದಂಡ ವಿಧಿಸುತ್ತದೆ.
ಈಗಾಗಲೇ ಮೆಟ್ರೋದಲ್ಲಿ ಕುಡಿಯುವುದು, ತಿನ್ನುವುದು ಹಾಗೂ ಉಗುಳುವುದನ್ನು ನಿಷೇಧಿಸಲಾಗಿದೆ ಆದರೂ ಕೂಡ ಕೆಲವರು ನಿಯಮಗಳನ್ನು ಪಾಲಿಸದೆ ದಂಡ ಕಟ್ಟಿರೋದುಂಟು. ಅದರಂತೆ ಮತ್ತೆ ಇದೀಗ ಮೆಟ್ರೋ ನಿಲ್ದಾಣದ ಆವರಣದಲ್ಲಿ ಯುವಕನೊಬ್ಬನು ಗುಟ್ಕಾ ಸೇವಿಸಿ ಮೆಟ್ರೋ ಆವರಣದಲ್ಲಿ ಉಗಳಿರುವುದರಿಂದ ಬಿಎಮ್ಆರ್ಸಿಎಲ್ ಅವರಿಗೆ ದಂಡ ವಿಧಿಸಿದೆ.
ಹೌದು, ಮೇ 2 2025ರ ಸಂಜೆ ಸುಮಾರು 6:30ಕ್ಕೆ ಗ್ರೀನ್ ಲೈನ್ ಕನಕಪುರ ರಸ್ತೆಯಲ್ಲಿರುವ ದೊಡ್ಡಕಲಸಂದ್ರ ಮೆಟ್ರೋ ನಿಲ್ದಾಣದ ಪ್ಲಾಟ್ ಫಾರ್ಮ್ 01ರ ಲಿಫ್ಟ್ ಬಳಿಯಲ್ಲಿ ಪಾನ್ ಮಸಾಲಾ ಉಗುಳುತ್ತಿದ್ದ ಪ್ರಯಾಣಿಕನನ್ನು ಪತ್ತೆ ಹಚ್ಚಿ ಮೆಟ್ರೋ ಅಧಿಕಾರಿಗಳು ದಂಡ ವಿಧಿಸಿರುವುದಾಗಿ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ತಿಳಿಸಿದೆ. ಇದನ್ನೂ ಓದಿ: ರೈತರ ಪಂಪ್ ಸೆಟ್ ಗಳಿಗೆ ಹಗಲು ಹೊತ್ತಿನಲ್ಲಿಯೇ ವಿದ್ಯುತ್ ನೀಡಲು ತೀರ್ಮಾನ: ಡಿಸಿಎಂ
ಮೆಟ್ರೋ ಆವರಣದಲ್ಲಿ ಉಗುಳುವುದು ಮತ್ತು ಕಸದಂಚುಗಳನ್ನು ಎಸೆಯುವುದು ಪರಿಸರ ಹಾಳಾಗುವುದಲ್ಲದೆ, ಇತರೆ ಪ್ರಯಾಣಿಕರ ಆರೋಗ್ಯಕ್ಕೂ ಅಪಾಯವನ್ನು ಉಂಟುಮಾಡುತ್ತದೆ. ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಸ್ವಚ್ಛ, ಆರೋಗ್ಯಕರ ಮತ್ತು ಸುರಕ್ಷಿತ ಸಾರ್ವಜನಿಕ ಸಾರಿಗೆಯ ವ್ಯವಸ್ಥೆಗಾಗಿ ಕಟಿಬದ್ಧವಾಗಿದೆ.
ಚ್ಛತೆ ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಎಲ್ಲ ಪ್ರಯಾಣಿಕರು ಸಹಕರಿಸಿ, ಇಂತಹ ಘಟನೆಗಳು ಸಂಭವಿಸಿದರೆ ತಕ್ಷಣವೇ ಮೆಟ್ರೋ ಅಧಿಕಾರಿಗಳಿಗೆ ಮಾಹಿತಿ ನೀಡುವಂತೆ ಬಿಎಂಆರ್ಸಿಎಲ್ ಮನವಿ ಮಾಡಿದೆ.
