ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ: ಡಿಸಿಎಂ

ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ: ಡಿಸಿಎಂ

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ಆಡಳಿತ ಪಕ್ಷದ ಮೇಲೆ ವಿರೋಧ ಪಕ್ಷಗಳು ಒಂದಲ್ಲ ಒಂದು ರೀತಿ ಆರೋಪ ಮಾಡುತ್ತಿದ್ದಾರೆ.

ಇದರ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದ ಗ್ಯಾರಂಟಿಗಳನ್ನು ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಹೇಳಿದ್ದಾರೆ.

ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ವಿರೋಧ ಪಕ್ಷಗಳಿಗೆ ಮತದಾರರ ಒಲವು ಗಳಿಸಲು ಯಾವುದೇ ವಿಷಯ ಸಿಕ್ಕಿಲ್ಲ. ಹಾಗಾಗಿ ನಮ್ಮ ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ವಿರೋಧ ಪಕ್ಷದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನ ನಗರದಲ್ಲಿ ಲೋಕಸಭಾ ಚುನಾವಣೆಯ ಪ್ರಯುಕ್ತ ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಪ್ರಚಾರ ಮಾಡುತ್ತಿರುವ ಸಂದರ್ಭದಲ್ಲಿ ವ್ಯಕ್ತಿ ಒಬ್ಬರ ಕೈಯಲ್ಲಿ ಗನ್ ಇಟ್ಟುಕೊಂಡು ಸಿಎಂ ಇದ್ದ ವಾಹನ ಹತ್ತಿದ್ದ ವಿಷಯ ನನಗೆ ಗೊತ್ತೇ ಇರಲಿಲ್ಲ ಎಂದು ಹೇಳಿದರು.

 

 

Related