ಇಂದು ಎಸ್ ಎಸ್ ಎಲ್ ಸಿ ಪರೀಕ್ಷೆ ಪಲಿತಾಂಶ

ಇಂದು ಎಸ್ ಎಸ್ ಎಲ್ ಸಿ ಪರೀಕ್ಷೆ ಪಲಿತಾಂಶ

ಬೆಂಗಳೂರು: ಇಂದು ಕರ್ನಾಟಕ ರಾಜ್ಯದಲ್ಲಿ 10ನೇ ತರಗತಿಯ ಫಲಿತಾಂಶ ಹೊರ ಬಿದ್ದಿದ್ದು ಶೇಕಡ 73.40 ವಿದ್ಯಾರ್ಥಿಗಳು ತೇರ್ಗಡೆ ಗೊಂಡಿದ್ದಾರೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಡೆಸಿದ 2023-24ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಗೊಂಡಿದೆ.

ಕರ್ನಾಟಕದಲ್ಲಿ ಈ ಸಲ ಎಸ್ಎಸ್‌ಎಲ್‌ಸಿ ಪರೀಕ್ಷೆಗೆ 8.69 ಲಕ್ಷ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. ಈ ಪೈಕಿ 4.41 ಲಕ್ಷ ಬಾಲಕರು, 4.28 ಬಾಲಕಿಯರು. ಅಲ್ಲದೆ, 18,225 ಖಾಸಗಿ ವಿದ್ಯಾರ್ಥಿಗಳು, 41,375 ಪುನರಾವರ್ತಿತ ವಿದ್ಯಾರ್ಥಿಗಳು ಹಾಗೂ 5,424 ವಿಭಿನ್ನ ಸಾಮರ್ಥ್ಯದ ವಿದ್ಯಾರ್ಥಿಗಳು ಕರ್ನಾಟಕದ 2,750 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆದಿದ್ದರು.

ಇನ್ನು ವಿದ್ಯಾರ್ಥಿಗಳು ಫಲಿತಾಂಶವನ್ನು karresults.nic.in ಮತ್ತು kseab.karnataka.gov.in ವೆಬ್ ಸೈಟ್ ನಲ್ಲಿ ಫಲಿತಾಂಶ ವೀಕ್ಷಿಸಬಹುದು.

Related