ಎಸ್‌ಎಸ್‌ಎಲ್‌ಸಿ ಪರೀಕ್ಷೆ : ಡಿಸಿ ಸಭೆ

ಎಸ್‌ಎಸ್‌ಎಲ್‌ಸಿ ಪರೀಕ್ಷೆ : ಡಿಸಿ ಸಭೆ

ಕಾರವಾರ : ಉತ್ತರ ಕನ್ನಡ ಜಿಲ್ಲೆಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಪೂರ್ವ ಸಿದ್ಧತೆ ಕುರಿತು ವಿವಿಧ ತಾಲೂಕುಗಳ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿ ಡಾ. ಹರೀಶಕುಮಾರ್ ಕಚೇರಿಯಲ್ಲಿ ವಿಡಿಯೋ ಸಂವಾದ ನಡೆಸಿದರು.

ಕೊರೋನಾ ಭೀತಿ ಹಿನ್ನೆಲೆಯಲ್ಲಿ ಲಾಕ್‌ಡೌನ್‌ನಿಂದ ಮುಂದೂಡಲಾಗಿದ್ದ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯನ್ನು ಜೂನ್ 25ರಿಂದ ಜುಲೈ 4ರವರೆಗೆ ಜಿಲ್ಲೆಯಾದ್ಯಂತ ನಡೆಸಲಾಗುತ್ತಿದೆ.

ಪರೀಕ್ಷೆಗೆ ಹಾಜರಾಗುವ ಪ್ರತಿಯೊಬ್ಬ ವಿದ್ಯಾರ್ಥಿಗಳನ್ನು ಥರ್ಮಲ್ ಸ್ಕ್ರೀನಿಂಗ್ ಮಾಡಿ ನಂತರ ಕೈಗಳಿಗೆ ಸ್ಯಾನಿಟೈಜರ್ ನೀಡಿ ಪರೀಕ್ಷಾ ಕೊಠಡಿಗಳಿಗೆ ಕಳುಹಿಸಲಾಗುತ್ತಿದೆ. ಹೀಗಾಗಿ ವಿದ್ಯಾರ್ಥಿಗಳು ಪರೀಕ್ಷೆ ಪ್ರಾರಂಭದ ಒಂದು ಗಂಟೆ ಮುಂಚಿತವಾಗಿ ಪರೀಕ್ಷಾ ಕೇಂದ್ರಗಳಿಗೆ ಹಾಜರಾಗಬೇಕು ಎಂದು ತಿಳಿಸಿದರು.

ಪರೀಕ್ಷೆಗೆ ಬರುವ ಪ್ರತಿಯೊಬ್ಬ ವಿದ್ಯಾರ್ಥಿಯನ್ನು ಆರೋಗ್ಯ ತಪಸಣೆಗೆ ಒಳಪಡಿಸಲು ಆರೋಗ್ಯ ಸಹಾಯಕರನ್ನು ನಿಯೋಜಿಸಬೇಕು. ಯಾವುದೇ ಆತಂಕಗಳಿಗೆ ಅವಕಾಶ ಮಾಡಿಕೊಂಡದೇ ಸಮರ್ಥವಾಗಿ ಪರೀಕ್ಷೆ ನಡೆಸಲು ಸಿದ್ಧರಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.

ಪರೀಕ್ಷಾ ದಿನದಂದು ಕೇಂದ್ರದ ಸುತ್ತಮುತ್ತಲೂ 200 ಮೀಟರ್ ನಿಷೇಧಿತ ಪ್ರದೇಶವೆಂದು ಘೋಷಿಸಲಾಗುತ್ತಿದೆ. ಈ ವ್ಯಾಪ್ತಿಯಲ್ಲಿ ಪರೀಕ್ಷಾರ್ಥಿಗಳು ಹಾಗೂ ಪರೀಕ್ಷೆಗೆ ನೇಮಕೊಂಡ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ಹೊರತುಪಡಿಸಿ ಉಳಿದ ವ್ಯಕ್ತಿಗಳಿಗೆ ಪ್ರವೇಶ ನಿಷೇಧ ವಿರುತ್ತದೆ, ಅಲ್ಲದೇ ಈ ವ್ಯಾಪ್ತಿಯಲ್ಲಿ ಝರಾಕ್ಸ್ ಅಂಗಡಿಗಳನ್ನು ಮುಚ್ಚಲು ಆದೇಶ ಹೊರಡಿಸುವುದಾಗಿ ಮತ್ತು ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆಯನ್ನು ಸಹ ಕಲ್ಪಿಸಲಾಗುವುದೆಂದು ಜಿಲ್ಲಾಧಿಕಾರಿಗಳು ತಿಳಿಸಿದರು.

Related