ಎಸ್‌ಎಸ್‌ಎಲ್‌ಸಿ ಪರೀಕ್ಷೆ ವೇಳಾಪಟ್ಟಿ ಪ್ರಕಟ ಯಾವಾಗ?

ಎಸ್‌ಎಸ್‌ಎಲ್‌ಸಿ ಪರೀಕ್ಷೆ ವೇಳಾಪಟ್ಟಿ ಪ್ರಕಟ ಯಾವಾಗ?

ಬೆಂಗಳೂರು: ಕೋವಿಡ್-19 ಲಾಕ್ ಡೌನ್ ಕಾರಣದಿಂದ ಮುಂದೂಡಲಾಗಿದ್ದ ಎಸ್ ಎಸ್ ಎಲ್ ಸಿ ಪರೀಕ್ಷೆಯ ವೇಳಾಪಟ್ಟಿಯನ್ನು ಸೋಮವಾರ ಅಂತಿಮಗೊಳಿಸಿ ಬಿಡುಗಡೆ ಮಾಡಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಕುರಿತು ಮಾಹಿತಿ ನೀಡಿರುವ ಸಚಿವ ಸುರೇಶ್‌ ಕುಮಾರ್‌, “10ನೇ ತರಗತಿ ಪರೀಕ್ಷೆಗಳನ್ನು ಶೀಘ್ರದಲ್ಲಿ ನಡೆಸುವ ಸಲುವಾಗಿ ಶಿಕ್ಷಣ ಇಲಾಖೆಯಲ್ಲಿ ಚರ್ಚೆಗಳು ನಡೆಯುತ್ತಿವೆ. ಸೋಮವಾರ ಈ ಕುರಿತು ಮಹತ್ವದ ಚರ್ಚೆ ನಡೆಯಲಿದ್ದು, ಆನಂತರ ಪರೀಕ್ಷೆ ವೇಳಾಪಟ್ಟಿ ಪ್ರಕಟಿಸುವ ಸಾಧ್ಯತೆ ಇದೆ ಎಂದಿದ್ದಾರೆ.

ಎಪ್ರಿಲ್ ನಲ್ಲಿ ನಡೆಯಬೇಕಿದ್ದ ಹತ್ತನೇ ತರಗತಿ ವಿದ್ಯಾರ್ಥಿಗಳ ಪರೀಕ್ಷೆ ಕೋವಿಡ್-19 ಕಾರಣದಿಂದ ಮುಂದೂಡಿಕೆಯಾಗಿದೆ. ವಿದ್ಯಾರ್ಥಿಗಳ ಹಿತ ಕಾಯ್ದುಕೊಂಡು, ಸೂಕ್ತ ವ್ಯವಸ್ಥೆಗಳೊಂದಿಗೆ ಪರೀಕ್ಷೆ ನಡೆಸಲಾಗುವುದು ಎಂದು ಸಚಿವರು ಹೇಳಿದ್ದಾರೆ.

Related